ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಮೂರ್ನಾಲ್ಕು ದಿನ ಮಳೆ ಜೋರಾಗಲಿದೆ ಎಂದು ತಿಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಲ್ಲಿ ಮಳೆ ಮುಂದುವರೆಯಲಿದ್ದು, ಆಗಸ್ಟ್​ 25ರವರೆಗೆ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

RELATED ARTICLES  2019-20ನೇ ಸಾಲಿನ ಡಿಫ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಇಂದಿನಿಂದ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಮಳೆ ಸುರಿಯುತ್ತಿದೆ. ಸಮುದ್ರದಲ್ಲಿ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವರೆಗೆ ಗಾಳಿ ಬೀಸಬಹುದಾಗಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 24ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

RELATED ARTICLES  ಏಮ್ಸ್ ನಲ್ಲಿ ವಿವಿಧ ಹುದ್ದೆಗಳು.