ಹುಬ್ಬಳ್ಳಿ: ಗಣೇಶ ಹಬ್ಬದ ಅಂಗವಾಗಿ ಅಗಸ್ಟ್ 26 ಮತ್ತು 27 ರಂದು ಪುಣೆ, ಮಹಾರಾಷ್ಟ್ರ, ಬೆಂಗಳೂರು ಹಾಗೂ ರಾಜ್ಯ ಮತ್ತು ಅಂತರ ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ 500 ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1 ರಂದು ಬೆಂಗಳೂರು, ಮಂಗಳೂರು, ಹೈದ್ರಾಬಾದ, ಪುಣೆ ಇನ್ನಿತರ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಹೆಚ್ಚುವರಿ ಸಾರಿಗೆಗಳು ಸಂಚರಿಸಲಿವೆ.
ಪ್ರಯಾಣಿಕರು ಮುಂಗಡ ಟಿಕೇಟ್‌ಗಳನ್ನು www.ksrtc.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.
ಪ್ರಯಾಣಿಕರು ವಿಶೇಷ ಹೆಚ್ಚುವರಿ ಸಾರಿಗೆಗಳ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.