ದಾಂಡೇಲಿ: ಮನೆಯಲ್ಲಿ ಯಾರೂ ಇಲ್ಲದಿದ್ದ ಸಮಯದಲ್ಲಿ ಕೊಠಡಿಯಲ್ಲಿ ಮನೆಯ ಯುವಕನೋರ್ವ ನೇಣಿಗೆ ಶರಣಾದ ಘಟನೆ ಇಲ್ಲಿನ ವಿಜಯನಗರದಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಸತೀಶ ಕುಪ್ಪುಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂಬುದಾಗಿ ಸ್ಥಳೀಯ ಪತ್ರಿಕೆ ವರದಿಮಾಡಿದೆ.
ನಗರದ ಕಾಗದ ಕಾರ್ಖಾನೆಯಲ್ಲಿ ಕ್ಯಾಜುವಲ್ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನಾಗಿದ್ದ ಈತ, ಮನೆಯಲ್ಲಿ ಯಾರೂ ಇಲ್ಲದಿರುವ ಸಮತದಲ್ಲಿ ನೇಣಿಗೆ ಶರಣಾಗಿದ್ದಾನೆ. ಹೊರಗಡೆ ಹೋಗಿದ್ದ ತಾಯಿ ಬಂದು ನೋಡಿದಾಗಲೆ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ನಗರಸಭಾ ಸದಸ್ಯೆ ಯಾಸ್ಮಿನ್ ಕಿತ್ತೂರು ಭೇಟಿ ನೀಡಿದ್ದಾರೆ. ನಗರ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.