ಆಗಸ್ಟ್ 23 ರಂದು ಗೋವಾದಲ್ಲಿ ನಿಧನರಾದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ರನ್ನು ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೋಗಟ್ ಕುಟುಂಬ ಆರೋಪಿಸಿದೆ.ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಪಿಎ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖ್ವಿಂದರ್ ಅವರು ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ.

ಫೋಗಟ್ ಅವರ ಸಹೋದರ ರಿಂಕು ಢಾಕಾ ಅವರು ಈಕುರಿತು ಗೋವಾದಲ್ಲಿ ದೂರು ದಾಖಲಿಸಿದ್ದಾರೆ, ಅವರ ಸಹೋದರಿ ಸಾಯುವ ಕೆಲವು ಗಂಟೆಗಳ ಮೊದಲು ತಮ್ಮ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಆ ಸಂಭಾಷಣೆಯ ಸಮಯದಲ್ಲಿ ತನ್ನ ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು ಎಂದು ಹೇಳಿದ್ದಾರೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 23-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಸೋನಾಲಿ ಪೋಗಟ್ ಮೇಲೆ ಅತ್ಯಾಚಾರವೆಸಗಿ ಅದರ ವೀಡಿಯೊವನ್ನು ಮಾಡಿದ್ದಾರೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಸೋನಾಲಿ ಪೋಗಟ್ ಸಹೋದರ ಆರೋಪಿಸಿದ್ದಾಗಿ ವರದಿಯಾಗಿದೆ.

RELATED ARTICLES  ಮತ್ತೆ ಏರಿಕೆ ಕಾಣುತ್ತಿರುವ ಕರೋನಾ : ರಾಜ್ಯಕ್ಕೆ ಕೇಂದ್ರದ ಎಚ್ಚರಿಕೆ.

ಇತ್ತ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಪೋಗಟ್ ದೇಹದ ಮೇಲೆ ಹಲವು ಗಾಯಗಳು ಇರುವುದು ಪತ್ತೆಯಾಗಿದೆ. ಹೀಗಾಗಿ ಪ್ರಕರಣವನ್ನು ಕೊಲೆ ಪ್ರಕರಣವನ್ನಾಗಿ ಬದಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಜಸ್ಪಾಲ್ ಸಿಂಗ್ ಅವರೇ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.