ಕುಮಟಾ : ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಕಣಿಯ ಸಹ ಶಿಕ್ಷಕಿಯಾಗಿ, ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದ, ಹಾಗೂ ಸಮಾಜಮುಖಿ ಚಿಂತನೆಗಳಿಂದ ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದ ಶ್ರೀಮತಿ ಭವಾನಿ ಪಟಗಾರರವರು ಬೆಳಿಗ್ಗೆ ನಾಲ್ಕು ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಕಣಿಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಕುಟುಂಬದವರು ಹಾಗೂ ಅಪಾರ ವಿದ್ಯಾರ್ಥಿಗಳ ಬಳಗವನ್ನು ಅಗಲಿದ್ದಾರೆ. ಇವರು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸೇವೆಯನ್ನು ಸಲ್ಲಿಸಿ, ತಾಲೂಕಿನ ಹಲವೆಡೆ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಮಟಾ ತಾಲೂಕಿನ ಅಧ್ಯಕ್ಷರಾದ ರವೀಂದ್ರ ಭಟ್ಟ ಸೂರಿ ಹಾಗೂ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ ಹಾಗೂ ಅವರ ಅಗಲುವಿಕೆಯ ದುಃಖವನ್ನು ಬರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸಿದ್ದಾರೆ.