ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಶ್ರೀಗಳ ವಿರುದ್ಧ ಮೈಸೂರಿನ ನಜರಾಬಾದ್​ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ಬಾಲಕಿಯರ ದೂರು ನೀಡಲಾಗಿತ್ತು. ಇಬ್ಬರು ಬಾಲಕಿಯರು ಲೂಂಗಿಕ ದೌರ್ಜನ್ಯದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾಮೀಜಿ ಬುದ್ಧಿವಂತಿಕೆಯಿಂದ ಸಮಸ್ಯೆ ಎದುರಿಸಬೇಕಾಗಿದೆ. ಇದಕ್ಕೆ ಮಠದ ಭಕ್ತರು ಸಹಕರಿಸಬೇಕು. ಮಠದ ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ಬಂದಿದೆ. ಇಂತಹ ಸಂದರ್ಭಗಳು ನಮಗೆ ಬಂದಿದ್ದು ಇದೇ ಮೊದಲೇನು ಅಲ್ಲ. ಹೀಗಾಗಿ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದ್ದಾರೆ.

RELATED ARTICLES  ಗುಜರಾತ್ ನಲ್ಲಿ ಮತ್ತೆ ಬಿಜೆಪಿ !! ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಛಿದ್ರ ಸಮೀಕ್ಷೆಯಿಂದ ಬಹಿರಂಗ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಮಠಕ್ಕೆ ಆಗಮಿಸಿದ್ದಾರೆ. ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಶ್ರೀಗಳು, ಬಂದಿರುವ ಸಂಕಟವನ್ನು ಧೈರ್ಯವಾಗಿ ಎದುರಿಸುತ್ತೇನೆ. ಈ ನೆಲದ ಕಾನೂನನ್ನು ಗೌರವಿಸಬೇಕುಯಾವುದೇ ಪಲಾಯನವಾದವಿಲ್ಲ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ ಎಂದು ಮನವಿ ಮಾಡಿಕೊಂಡರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 22-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?