ಭಟ್ಕಳ: ಇಲ್ಲಿನ ಪ್ರತಿಷ್ಠೀತ ವಿದ್ಯಾಸಂಸ್ಥೆಯಾದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಇತ್ತೀಚೆಗೆ ರಾಜ್ಯ, ರಾಷ್ಟ್ರೀಯ , ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಆಯೋಜನೆಗೊಂಡಿದ್ದ ಕರಾಟೆ, ಬ್ಯಾಡ್ಮಿಂಟನ್, ಕ್ಯಾರಂಮ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಭಟ್ಕಳ ಎಜ್ಯುಕೇಶನ್ ಟ್ರಸ್ಟನ ಅಧ್ಯಕ್ಷ ಡಾ. ಸುರೇಶ ನಾಯಕ್, ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಚೆರಮೆನ್ ರಾಜೇಶ ನಾಯಕ್, ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶೈಲಜಾ ಹೆಗ್ಡೆ ಈ ಸಂರ್ಧಭದಲ್ಲಿ ಉಪಸ್ಥಿತರಿದ್ದರು.