ಭಟ್ಕಳ: ತೆಂಗಿನ ಕಾಯಿ ಕೀಳಲು ಮರ ಏರಿದ ವ್ಯಕ್ತಿಯೋರ್ವರು, ಮರ ತುಂಡಾಗಿ ಮರದೊಂದಿಗೆ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಕೆ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಶಂಕರ ಮಂಜು ಮೊಗೇರ ಎಂದು ಗುರುತಿಸಲಾಗಿದೆ. ಮೃತರು ಸಹೋದರ, ಹೆಂಡತಿ, ಇಬ್ಬರು ಗಂಡು ಹಾಗೂ ಒಂದು ಹೆಣ್ಣು ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.