ಭಟ್ಕಳ : ತಾಲೂಕಿನ ತಟ್ಟಿಹಕ್ಕಲಿನಲ್ಲಿ ತಂದೆಯ ತಿಥಿ ಕಾರ್ಯ ನಡೆಯುತ್ತಿದ್ದ ಮನೆಯೊಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲೆಂಡರ್ ಸೋರಿಕೆಯಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ತಂದೆ ಕಾರ್ಯ ಹಿನ್ನೆಲೆ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲೆಂಡರ್ ಆಫ್ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ತಗುಲಿದೆ ಎನ್ನಲಾಗಿದೆ.

RELATED ARTICLES  ಫೆಬ್ರುವರಿ 3 ರಿಂದ 7ರ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ವೆಂಕಟೇಶ ಲಕ್ಷ್ಮೀನಾರಾಯಣ ಶಾನಭಾಗ ಎನ್ನುವವರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸೋರಿಕೆಯಾಗಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ತಕ್ಷಣ ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಮನೆಯಲ್ಲಿದ್ದವರ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿ.ಎಸ್.ಐ ಭರತ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಎಸ್ ರಮೇಶ, ಮನೋಜ ಬಾಡ್ಕರ್, ನಾರಾಯಣ ಪಟಗಾರ, ಕುಮಾರ ನಾಯ್ಕ, ಪುರುಸೊತ್ತಮ ನಾಯ್ಕ, ಅಕ್ಷಯ ಹಿರೇಮಠ, ಗ್ರಹ ರಕ್ಷಕ ಸಿಬ್ಬಂದಿ ಕುಮಾರ ನಾಯ್ಕ ಮತ್ತು ಮಂಜು ಶೇಟ್ ಇದ್ದರು.

RELATED ARTICLES  108 ತುರ್ತು ಸೇವೆಯಲ್ಲಿ ಸಮಸ್ಯೆ : ಆರೋಗ್ಯ ಸಚಿವರು ಹೇಳಿದ್ದೇನು?