ಯಲ್ಲಾಪುರ: ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಡಸೆಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬುವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ ಗಳನ್ನು ದಾಸ್ತಾನು ಇಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಸಿಲಿಂಡರ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಈ ಕಾರ್ಯಾಚರಣೆಯು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ ಅವರ ನೇತೃತ್ವದಲ್ಲಿ ನಡೆದಿತ್ತು ಎಂದು ವರದಿಯಾಗಿದೆ.