ಅಂಕೋಲಾ: ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಹಾಗೂ ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ಕಂಡ ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ಪ ಗೃಹ ಸೂರ್ವೆಯಲ್ಲಿ ನಿಧನರಾದರು.

ಇತ್ತೀಚೆಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು,ಸಂಘ ಸಂಸ್ಥೆಗಳು, ಜಿಲ್ಲಾಡಳಿತ, ತಾಲೂಕು ಆಡಳಿತ, ಭಾರತೀಯ ತಟರಕ್ಷಕ ಪಡೆ ಸೇರಿದಂತೆ ಹಲವರು ಸೂರ್ವೆಯ ವೆಂಕಣ್ಣ ನಾಯಕ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.

RELATED ARTICLES  ಯುವಾ ಬ್ರಿಗೇಡ್ ಕಾರ್ಯಕ್ಕೆ ಮೆಚ್ಚುಗೆ.

ಸೂರ್ವೆಯ ವೆಂಕಣ್ಣ ನಾಯಕ ಅವರಿಗೆ, ಕಳೆದ 2-3 ದಿನಗಳ ಹಿಂದಷ್ಟೇ ಮತ್ತೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ವೆಂಟಿಲೇಟರ್ ಚಿಕಿತ್ಸೆ ನೀಡಿ , ತದನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ಪ ಗೃಹ ಸೂರ್ವೆಯಲ್ಲಿ ನಿಧನರಾಗಿದ್ದಾರೆ.

RELATED ARTICLES  ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲಂಬ ಸಂವತ್ಸರದ ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ

ವೆಂಕಣ್ಣ ನಾಯಕ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕಿ ರೂಪಾಲಿ ನಾಯ್ಕ, ಶಾಸಕ ಆರ್ ವಿ ದೇಶಪಾಂಡೆ, ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಂತ್ಯ ಸಂಸ್ಕಾರ ಸೋಮವಾರ ಬೆಳಗ್ಗೆ ಅವರ ಹುಟ್ಟೂರಿನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.