ಬೆಂಗಳೂರು: ಐಟಿ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಸಿಕೊಳ್ಳುವ ಬೆಂಗಳೂರು ಅಕ್ಷರಶಃ ಮುಳುಗಿದೆ. ಅರ್ಧ ಬೆಂಗಳೂರಿನ ಜನವಸತಿ ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ರಸ್ತೆಗಳೆಲ್ಲ ನದಿಗಳಂತಾಗಿವೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಜಲಪ್ರಳಯದಲ್ಲಿ ಸಿಕ್ಕಿಕೊಂಡಿದ್ದ ಜನರನ್ನು ಬೋಟ್ಗಳಲ್ಲಿ ಕರೆತರುವ ಪರಿಸ್ಥಿತಿ ನಿರ್ವಣವಾಗಿದೆ.
ಭಾನುವಾರ ರಾತ್ರಿ ಕೆಲವೇ ಗಂಟೆ ಸುರಿದ ಮಳೆಯಿಂದಾಗಿ ಬ್ರ್ಯಾಂಡ್ ಬೆಂಗಳೂರಿನ ಅವ್ಯವಸ್ಥೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ 14 ವರ್ಷದ ಬಳಿಕ ದಾಖಲೆ ಪ್ರಮಾಣದ ಮಳೆ ಸುರಿದಿದೆ.
ಮನೆಗಳು, ಐಟಿ-ಬಿಟಿ ಕಂಪನಿಗಳು, ಶಾಪಿಂಗ್ ಮಾಲ್ಗಳು, ಅಪಾರ್ಟ್ವೆುಂಟ್ಗಳು ಸೇರಿ 300 ಕಡೆ ಮಳೆ ನೀರು ನುಗ್ಗಿದೆ. ರಸ್ತೆಗಳಲ್ಲಿ 4 ಅಡಿವರೆಗೆ ನೀರು ಹರಿಯುತ್ತಿದೆ. ನೈಸರ್ಗಿಕವಾಗಿ ನೀರು ಹರಿಯುವ ಮೂಲಗಳಾದ ಕೆರೆ, ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಮನೆ ಮತ್ತು ಬಡಾವಣೆಗಳನ್ನು ನಿರ್ವಿುಸಿಕೊಂಡ ಪರಿಣಾಮ ಪ್ರತಿ ಬಾರಿ ಮಳೆ ಬಂದಾಗಲೂ ನೀರು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗುತ್ತಿದೆ.
ವರುಣನ ಆರ್ಭಟದಿಂದಾಗಿ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಒಂದು ವಾರದ ಮಟ್ಟಿಗೆ ಐಟಿ-ಬಿಟಿ ಕಂಪನಿಗಳು ವರ್ಕ್ ಫ್ರಂ ಹೋಂ ಘೋಷಿಸಿವೆ. ಪ್ರತಿಷ್ಠಿತ ಶಾಲೆಗಳು ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್ಲೈನ್ಗೆ ಮೊರೆಹೋಗಿವೆ.
ಭಾನುವಾರ ಸಂಜೆಯಿಂದಲೇ ಆರಂಭವಾದ ಮಳೆ ತಡರಾತ್ರಿವರೆಗೆ ಸುರಿದಿದ್ದು, ದಕ್ಷಿಣ ಒಳನಾಡಿನಲ್ಲಿ 90 ರಿಂದ 150 ಮಿ.ಮೀ. ಪ್ರಮಾಣ ದಾಖಲಾಗಿದೆ. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ತಲಾ ಒಂದೊಂದು ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಇನ್ನು, ಚಾಮರಾಜನಗರ ಜಿಲ್ಲೆಯ ದಡಹಳ್ಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಚಾಮರಾಜನಗರ, ಮೈಸೂರು ಸೇರಿ ವಿವಿಧೆಡೆ ನದಿಗಳು ಉಕ್ಕಿ ಹರಿದಿವೆ. ನೂರಾರು ಕೆರೆಗಳು ತುಂಬಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ನೀರು ಹೊಲ- ಗದ್ದೆಗಳಿಗೆ ನುಗ್ಗಿ ಬೆಳೆ ನಷ್ಟವಾಗಿದೆ.
ಮುಂದಿನ 4 ದಿನ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಇದ್ದರೆ, ಸೆ.8ರಂದು ಈ ಭಾಗಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ. ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂ.ಗ್ರಾಮಾಂತರ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ.
ರಾಜಧಾನಿಯಲ್ಲಿ ಅವಾಂತರಗಳ ಸರಣಿ
- ಬೆಳ್ಳಂದೂರು ಬಳಿ ರಸ್ತೆ ಜಲಾವೃತಗೊಂಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ. 2 ಕಿ.ಮೀ ರಸ್ತೆ ದಾಟಲು ನಾಲ್ಕೈದು ತಾಸು ಬೇಕಾಗುತ್ತಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಟರ್ವಿುನಲ್, ವಿಐಪಿ ಲೇನ್, ಪಿಕಪ್ ಪಾಯಿಂಟ್ಗಳು ಜಲಾವೃತ. ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ನೀರು. ಟ್ರಾಯಕ್ಟರ್ಗಳ ಮೂಲಕ ಸಂಚರಿಸುವ ಅನಿವಾರ್ಯತೆ.
- ವಿಧಾನಸೌಧ ಬೇಸ್ವೆುಂಟ್ನ ಕ್ಯಾಂಟೀನ್ಗೂ ನುಗ್ಗಿದ ನೀರು.
- ಅನೇಕ ಅಪಾರ್ಟ್ವೆುಂಟ್ಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳ ತಳಮಹಡಿಯ ರ್ಪಾಂಗ್ ಪ್ರದೇಶಕ್ಕೆ ನೀರು ನುಗ್ಗಿ ತೇಲಾಡಿದ ವಾಹನಗಳು.
- ಮಳೆ ನಿಂತು 12 ತಾಸುಗಳಾದರೂ ರಸ್ತೆಗಳಲ್ಲಿ ಹರಿಯುತ್ತಿದ್ದ ನೀರು ಇಳಿದಿರಲಿಲ್ಲ. 20ಕ್ಕೂ ಅಧಿಕ ಕೆರೆಗಳು ತುಂಬಿ ಕೋಡಿಬಿದ್ದಿವೆ.
- ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ರಸ್ತೆ ಗುಂಡಿಗಳು ನಿರ್ವಣವಾಗಿದ್ದು, ವಾಹನ ಸಂಚಾರಕ್ಕೆ ಸಂಚಕಾರ ಬಂದಿದೆ.
Source : Vijayavani