ಭಟ್ಕಳ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್.07 ರಿಂದ ಸೆಪ್ಟೆಂಬರ್.11ರವರೆಗೆ ಅತಿ ಹೆಚ್ಚು ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ ಎಂದು ತಿಳಿದುಬಂದಿದೆ.

ಈ ಸಮಯದಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೆ.07ರಿಂದ ಸೆ.11ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎನ್ನಲಾಗಿದೆ.

RELATED ARTICLES  ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಹೆಸರು ನೊಂದಾಯಿಸಿ.

ಈ ಅವಧಿಯಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕ ನೀಡಿ, ಅಲ್ಲಿನ ಜನ
ಜಾನುವಾರುಗಳನ್ನು ಮುಂಚಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಗೊಳ್ಳುವಂತೆ ಹಾಗೂ ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ
ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಮಾಹಿತಿ

ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ
ಇಳಿಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ವರದಿಯಾಗಿದೆ.