ಭಟ್ಕಳ: ತಾಲೂಕಿನ ಮುರ್ಡೇಶ್ವರ ನ್ಯಾಷನಲ್ ಕಾಲನಿಯ ಸರ್ಕಾರಿ ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಕಿಟಕಿಯ ಹೊರಗೆ ಪೆನ್ಸಿಲ್ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದ ವೇಳೆ ಹಾವು ಬಾಲಕನ ಕಾಲಿಗೆ ಕಚ್ಚಿದೆ ಎನ್ನಲಾಗಿದೆ.

RELATED ARTICLES  ಉತ್ತರಕನ್ನಡದ ಪ್ರಮುಖ ಸುದ್ದಿಗಳು

5 ನೇ ತರಗತಿಯ ವಿದ್ಯಾರ್ಥಿ ಅಲ್ಫಾಝ್ ಸರ್ತಾಝ್ ಹಾವಿನ ಕಡಿತಕ್ಕೊಳಗಾದ ವಿದ್ಯಾರ್ಥಿ. ಕೂಡಲೇ ವಿದ್ಯಾರ್ಥಿಯನ್ನು ಮುರ್ಡೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಕಚ್ಚಿದ ಹಾವು ಯಾವುದು ಎಂಬ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

ಮಗುವನ್ನು ನೋಡಿದ ಪಾಲಕರಲ್ಲಿ ಗೊಂದಲ‌ ಉಂಟಾಗಿದೆ. ಅದಲ್ಲದೇ ಆ ಸನ್ನಿವೇಶದಲ್ಲಿ ಪಾಲಕರು ಭಾವುಕರಾದ ಬಗ್ಗೆ ವರದಿಯಾಗಿದೆ.

RELATED ARTICLES  ಆಟವಾಡುತ್ತಿದ್ದ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು.

ಹಾವು ಕಚ್ಚಿದ ಬಗ್ಗೆ ಮಾಹಿತಿ ಪಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರಕಾರಿ ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.