ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಇಂದು ನಿಧನರಾಗಿದ್ದಾರೆ. ಈ ಮೂಲಕ ಸಚಿವ ಉಮೇಶ್ ಕತ್ತಿ ಇನ್ನಿಲ್ಲವಾಗಿದ್ದಾರೆ. ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES  ಉತ್ತರ ಕನ್ನಡದ ಪ್ರತಿಭೆಗೆ ಅಮೇರಿಕಾದ ಲ್ಯುಸಿಯಾನಾ ವಿಶ್ವವಿದ್ಯಾಲಯದಿಂದ ಗೌರವ

ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಯಾವುದೇ ಫಲ ನೀಡಿಲ್ಲ ಎಂದು ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ.

RELATED ARTICLES  ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀ ಬೆಂಬಲ: ಎಂ.ಬಿ ಪಾಟೀಲ್-ಶ್ರೀಗಳ ಭೇಟಿ

ಆಂಧ್ರಪ್ರದೇಶ, ತೆಲಂಗಾಣದಂತೆ ಕರ್ನಾಟಕದಲ್ಲೂಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಉಮೇಶ್‌ ಕತ್ತಿ ದನಿ ಎತ್ತಿದ್ದರು. ಜತೆಗೆ, ಅಖಂಡ ರಾಜ್ಯದ ಸಿಎಂ ಆಗುವ ಆಕಾಂಕ್ಷೆಯನ್ನೂ ಬಹಿರಂಗವಾಗಿ ವ್ಯಕ್ತಪಡಿಸಿದ್ದರು.