ಶಿರಸಿ : ಹಿಂದೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯೋರ್ವ ಯಡಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿ ಆಕೆಯ ಮೈಮೇಲೆ ಕೈ ಹಾಕಿ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಷಯ ಮಡಿವಾಳ ಹೆರವಳ್ಳಿ ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಕೂಡಾ ಇಂತಹದೇ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಬಳಿಕ ಬೇಲ್ ಮೇಲೆ ಹೊರಗಡೆ ಬಂದಿದ್ದ ಎನ್ನಲಾಗಿದೆ.

RELATED ARTICLES  ತೆಂಗಿನ ತೋಟದಲ್ಲಿ ಸುಮಾರು 12 ಅಡಿ ಉದ್ದದ ಹೆಬ್ಬಾವನ್ನು

ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ತಡೆದು ಆಕೆಗೆ ಕಿರುಕುಳ ನೀಡಿ, ಆಕೆಯನ್ನು ಅಪಹರಣ ಮಾಡಲು ಉದ್ದೇಶಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಆರೋಪಿಯ ಮೇಲೆ ಪೋಕ್ಸೋ, ಅಪಹರಣಕ್ಕೆ ಪ್ರಯತ್ನ ಹಾಗೂ ದೈಹಿಕ ಹಿಂಸೆ ಸೇರಿದಂತೆ ಹಲವು ಕಲಂ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಇದೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.

RELATED ARTICLES  ಉತ್ತರಕನ್ನಡದಲ್ಲಿ ಕೊರೋನಾ‌ ಆರ್ಭಟ : ಒಂದೇ ದಿನ 142 ಕೇಸ್