ಕುಮಟಾ : ಜಿಲ್ಲಾ ಆಡಳಿತದ ನೇತೃತ್ವದಲ್ಲಿ ಕುಮಟಾ ಆರ್ಯ ಈಡಿಗ ನಾಮಧಾರಿ ಸಂಘಂ ಹಾಗೂ ` ಐಕ್ಯ’ ಸರ್ಕಾರೇತರ ಸಹಯೋಗದೊಂದಿಗೆ ಬ್ರಹ್ಮಶ್ರೀ ಶ್ರೀ ನಾರಾಯಣ ಗುರುಗಳ ಜಿಲ್ಲಾ ಮಟ್ಟದ ಜಯಂತಿ ಉತ್ಸವ ಸೆ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ನಾಮಧಾರಿ ಸಭಾ ಭವನದಲ್ಲಿ ನಡೆಯಲಿದೆ.

ಸಮಾಜ ಕಲ್ಯಾಣ, ಹಿಂದುಳಿ ವರ್ಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಉಪಸ್ಥಿತರಿರುವರು. ಶಾಸಕ ದಿನಕರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಆರ್.ವಿ.ದೇಶಪಾಂಡೆ, ಸುನಿಲ್ ನಾಯ್ಕ, ರೂಪಾಲಿ ನಾಯ್ಕ, ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ, ಸದಸ್ಯರಾದ ಎಸ್.ವಿ.ಸಂಕನೂರು, ಶಾಂತಾರಾಮ ಸಿದ್ದ್ದಿ, ಗಣಪತಿ ಉಳ್ವೇಕರ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಪುರಸಭೆ ಅಧ್ಯಕ್ಷೆ ಅನುರಾಧಾ ಬಾಳೇರಿ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಆರ್ಯ ಈಡಿಗ ನಾಮಧಾರಿ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಎಲ್. ನಾಯ್ಕ, ತಾಲ್ಲೂಕು ಘಟಕ ಅಧ್ಯಕ್ಷ ಮಂಜುನಾಥ ಆರ್ ನಾಯ್ಕ ಪಾಲ್ಗೊಳ್ಳುವರು. ನಿವೃತ್ತ ಪ್ರಾಧ್ಯಾಪಕ ಎಂ.ಜಿ. ನಾಯ್ಕ ಶ್ರೀ ನಾರಾಯಗಳ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

RELATED ARTICLES  ಗ್ರಾಮ ಒಕ್ಕಲು ಯುವ ಬಳಗದಿಂದ ಅಪಘಾತ ಪರಿಹಾರ ನಿಧಿಯ ವಿತರಣೆ

ಈ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವಕಾಶ ಕಲ್ಪಿಸಿ’ ಎಂದು ಸೂಚಿಸಿದರು. ಕುಮಟಾ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ಆರ್ ನಾಯ್ಕ, ` ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ನಾರಾಯಣಗುರುಗಳ ಕುರಿತು ಪ್ರಬಂಧ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪಧೆ ಏರ್ಪಡಿಸಲಾಗಿದೆ.

RELATED ARTICLES  ಭಟ್ಕಳ: ಎಐಟಿಎಂನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್

ಬಹುಮಾನ ವಿಜೇತರಿಗೆ ನಗದು, ಪುಸ್ತಕ ಹಾಗೂ ಅಭಿನಂದನಾ ಪತ್ರ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಗುವುದು. ಕಾರ್ಯಕ್ರಮದ ಅಂಗವಾಗಿ ಗುರುವಾರ ಮಧ್ಯಾಹ್ನ ಸಂಜೆ ೪ ಗಂಟೆೆಗೆ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಹಾಗೂ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಮೆರವಣಿಗೆ ನಡೆಸಲಾಗುವುದು’ ಎಂದು ತಿಳಿಸದರು. ತಹಶೀಲ್ದಾರ್ ವಿವೇಕ ಶೇಣ್ವಿ, ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನಾ ನಾಯಕ, ಶಿರಸ್ತೇದಾರ ಉಷಾ ನಾಯ್ಕ, ಕುಮಟಾ ಆರ್ಯ ಈಡಿಗ ನಾಮಧಾರಿ ಸಂಘದ ಪದಾಧಿಕಾರಿಗಳಾದ ರಾಘವೇಂದ್ರ ನಾಯ್ಕ, ಸಂತೋಷ ನಾಯ್ಕ, ಪ್ರಮೋದ ನಾಯ್ಕ ಹಾಗೂ `ಐಕ್ಯ’ ಸಂಸ್ಥೆಯ ಅಧ್ಯಕ್ಷ ಎಂ.ಜಿ. ನಾಯ್ಕ ಇದ್ದರು.