ಕುಮಟಾ: ಕುಮಟಾ ತಾಲೂಕಾ ಮಟ್ಟದ 14ವರ್ಷ ವಯೋಮಿತಿಯ ಪ್ರಾಥಮಿಕ ಶಾಲೆಗಳ ಇಲಾಖಾ ಕ್ರೀಡಾಕೂಟವನ್ನು ಶಾಸಕ ದಿನಕರ ಶೆಟ್ಟಿ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಉದ್ಘಾಟನೆ ಮಾಡಿದರು.

ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಎನ್ನುವುದು ಅತಿ ಅವಶ್ಯಕ. ಇಲಾಖೆಯ ವತಿಯಿಂದ ಕ್ರೀಡಾಕೂಟಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿರುವ ಶಿಕ್ಷಕರೆಲ್ಲರ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಪರ್ಧೆ ಅಂದಮೇಲೆ ಎಲ್ಲರೂ ಗೆಲ್ಲೋಕಾಗಲ್ಲ, ಗೆಲ್ಲುವುದಕ್ಕಿಂತಲೂ ಕ್ರೀಡಾಸ್ಫೂರ್ತಿಯೊಡನೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ ಎಂದರು.

RELATED ARTICLES  ಬೈಕ್ ಸಮೇತ ನೀರಿನಲ್ಲಿ ಕೊಚ್ಚಿಹೋದ ಹೊನ್ನಾವರ ಮೂಲದ ವ್ಯಕ್ತಿ

ಈ ಸಂದರ್ಭದಲ್ಲಿ ಕುಮಟಾ ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಉಪಾಧ್ಯಕ್ಷೆ ಸುಮತಿ ಭಟ್, ಸದಸ್ಯ ಸೂರ್ಯಕಾಂತ ಗೌಡ, ನಾಡುಮಾಸ್ಕೇರಿ ಗ್ರಾಮಪಂಚಾಯತ್ ಅಧ್ಯಕ್ಷೆ ಧನಶ್ರೀ ಅಂಕೋಲೆಕರ್, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ನಾಗರತ್ನಾ ನಾಯಕ, ಕ್ಷೇತ್ರ ಶಿಕ್ಷಣಾಧಿ ಆರ್. ಎಲ್. ಭಟ್, ಬಿ. ಅರ್. ಸಿ. ಸಮನ್ವಯಾಧಿಕಾರಿ ರೇಖಾ ನಾಯ್ಕ್,ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದು ಗಾಂವಕರ ಮತ್ತು ತಾಲೂಕಾ ಅಧ್ಯಕ್ಷ ರವೀಂದ್ರ ಸೂರಿ ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

RELATED ARTICLES  ಗೋಕರ್ಣದ ಓಂ ಬೀಚ್ ಕಡಲ ತೀರದಲ್ಲಿ ಪ್ರವಾಸಿಗ ಸಾವು