ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುಮಟಾದ ನಾಮಧಾರಿ ಸಭಾಭವನದಲ್ಲಿ ಬ್ರಹ್ಮಶ್ರೀ ಶ್ರೀ ನಾರಾಯಣ ಗುರುಗಳ ಜಯಂತಿ ನೆರವೇರಿತು.

ಕುಮಟಾ ಹೊನ್ನಾವರ ಕ್ಷೇತ್ರದ ವಿಧಾನಸಭಾ ಸದಸ್ಯರಾಗಿರುವ ಮಾನ್ಯ ಶ್ರೀ ದಿನಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನೆರವೇರಿದ ಈ ಕಾರ್ಯಕ್ರಮವನ್ನು ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟನೆ ಮಾಡಿದರು. ಕುಮಟಾ ಪುರಸಭಾ ಅಧ್ಯಕ್ಷೆ ಶ್ರೀಮತಿ ಅನುರಾಧಾ ಬಾಳೇರಿ, ಆರ್ಯ ಈಡಿಗ ನಾಮಧಾರಿ ಸಂಘದ ಜಿಲ್ಲಾಧ್ಯಕ್ಷ ಶ್ರೀ ಮಂಜುನಾಥ ಎಲ್. ನಾಯ್ಕ ಹಾಗೂ ತಾಲೂಕಾ ಅಧ್ಯಕ್ಷ ಶ್ರೀ ಮಂಜುನಾಥ ನಾಯ್ಕ ಕೊಡಕಣಿ, ಜಿಲ್ಲಾಧಿಕಾರಿ ಮಾನ್ಯ ಶ್ರೀ ಮುಲ್ಲೈ ಮುಗಿಲನ್, ಕುಮಟಾ ಉಪವಿಭಾಗದ ಸಹಾಯಕ ಆಯುಕ್ತ ಶ್ರೀ ರಾಘವೇಂದ್ರ ಬಿ. ಜಗಲಾಸರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಶ್ರೀ ನರೇಂದ್ರ ನಾಯಕ, ಐಕ್ಯ ಸಂಸ್ಥೆಯ ಅಧ್ಯಕ್ಷ ಶ್ರೀ ಎಮ್. ಜಿ. ನಾಯ್ಕ ಇವರು ವೇದಿಕೆಯಲ್ಲಿ ಆಸೀನರಾಗಿದ್ದರು.

RELATED ARTICLES  ಉತ್ತರಕನ್ನಡದ ಕೊರೋನಾ ವಿವರ ಇಲ್ಲಿದೆ

ಹಿಂದೂ ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಜನಜಾಗೃತಿ ಮೂಡಿಸಿದ ಶ್ರೀ ನಾರಾಯಣ ಗುರುಗಳು ಪ್ರಾತಃ ಸ್ಮರಣೀಯರು. ಇಂತಹ ಸಮಾಜ ಸುಧಾರಕರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗಮಾತ್ರ ಈ ಕಾರ್ಯಕ್ರಮವು ಅರ್ಥಪೂರ್ಣವಾಗುತ್ತದೆ ಎಂದು ಮಾನ್ಯ ಶಾಸಕರಾಗಿರುವ ಶ್ರೀ ದಿನಕರ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಹೇಳಿದರು.

ನಿವೃತ್ತ ಪ್ರಾಧ್ಯಾಪಕರಾಗಿರುವ ಪ್ರೊ|| ಎಮ್. ಜಿ. ನಾಯ್ಕ ಅವರು ಶ್ರೀ ನಾರಾಯಣ ಗುರುಗಳ ಕುರಿತು ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದ ಸಂಯೋಜಕರಾದ ಐಕ್ಯ ಸಂಸ್ಥೆಯ ಎಂ.ಜಿ ನಾಯ್ಕ, ಇತರರು ಹಾಜರಿದ್ದರು.

ದೇವಾಲಯದಲ್ಲಿ ವಿಶೇಷವಾಗಿ ಪ್ರಾರ್ಥನೆ

ಶಾಸಕರಾಗಿರುವ ಮಾನ್ಯ ಶ್ರೀ ದಿನಕರ ಶೆಟ್ಟಿಯವರು ಇಂದು ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆಯಲ್ಲಿ ಕುಮಟಾದ ದೇವರಹಕ್ಕಲ ಶಾಂತಿಕಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿದರು.

RELATED ARTICLES  ಉದಯ ಬಜಾರ್ ಗೆ ನಾಳೆ ರಜಾ: ಎಲ್ಲ ಗ್ರಾಹಕರೂ ಸಹಕರಿಸಲು ಮನವಿ.

ಜಿಲ್ಲಾಧಿಕಾರಿ ಮಾನ್ಯ ಶ್ರೀ ಮುಲ್ಲೈ ಮುಗಿಲನ್, ಕುಮಟಾ ಉಪವಿಭಾಗದ ಸಹಾಯಕ ಆಯುಕ್ತ ಶ್ರೀ ರಾಘವೇಂದ್ರ ಬಿ. ಜಗಲಾಸರ, ಕುಮಟಾ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀ ಹೇಮಂತಕುಮಾರ ಗಾಂವಕರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀ ಪ್ರಶಾಂತ ನಾಯ್ಕ, ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ಕೃಷ್ಣ ಪೈ, ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮೋಹಿನಿ ಗೌಡ, ಕುಮಟಾ ಪುರಸಭಾ ಉಪಾಧ್ಯಕ್ಷೆ ಶ್ರೀಮತಿ ಸುಮತಿ ಭಟ್ ಹಾಗೂ ಪುರಸಭಾ ಸದಸ್ಯರಾಗಿರುವ ಶ್ರೀಮತಿ ಶೈಲಾ ಗೌಡ, ಹೊನಗದ್ದೆ ಪಂಚಾಯತ್ ಸದಸ್ಯೆ ಶ್ರೀಮತಿ ಅನುರಾಧಾ ಭಟ್ ಮತ್ತು ಗಣ್ಯರನೇಕರು ಜೊತೆಗಿದ್ದರು.