ಕಾರವಾರ: ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ ಹಣ ವರ್ಗಾವಣೆ ಮಾಡಿ ಬ್ಯಾಂಕ್ ಗೆ ಮೋಸಗೊಳಿಸಿದ ಘಟನೆ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿದೆ.
ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ ಹಣ ವರ್ಗಾವಣೆ ಮಾಡಿ ಬ್ಯಾಂಕ್ ಗೆ ಮೋಸಗೊಳಿಸಿದ ಘಟನೆ ನಡೆದಿದ್ದು ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರ ಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ವರ್ಗಾವಣೆ ಮಾಡಿದ್ದಾನೆ.
ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್.ಬಿ.ಐಯಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ. ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.