ಕಾರವಾರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಂಕಣಿ ಜಾನಪದ ಕ್ಷೇತ್ರದ ಸಾಧಕಿ ಕಾರವಾರದ ಕುಮುದಾ ಗಡಕರ ಕೊಂಕಣಿ ಜಾನಪದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಾಗಿ ಮಂಗಳೂರಿನಲ್ಲಿ ನಡೆದ ಅಕಾಡೆಮಿ ಅಧ್ಯಕ್ಷ ಡಾ.ಕೆ.ಜಗದೀಶ ಪೈ ಸುದ್ದಿಗೋಷ್ಟಿಯಲ್ಲಿ ಘೋಷಿಸಿದ್ದಾರೆ ಎನ್ನಲಾಗಿದೆ.
ಕವಿ, ವಿಮರ್ಶಕ ಮಂಗಳೂರಿನ ಎಚ್.ಎಂ.ಫೆರ್ನಾಲ್‌ರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ, ಕೊಂಕಣಿ ನಾಟಕ, ಸಿನೇಮಾ
ಸಾಹಿತ್ಯ ಸಾಧಕ ಬೆಂಗಳೂರಿನ ರಮೇಶ ಕಾಮತ್‌ರಿಗೆ ಕೊಂಕಣಿ ಕಲಾ ಪ್ರಶಸ್ತಿ ಘೋಷಿಸಲಾಗಿದೆ. ಸೆಪ್ಟೆಂಬರ್.18
ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನ ಕಾಶೀಮಠದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತನಾರಾಯಣ
ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ ಪ್ರಶಸ್ತಿ ಪ್ರಧಾನ ಮಾಡುವರು. ಸಂಸದ ಡಿ.ವಿ.ಸದಾನಂದ ಗೌಡ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಪ್ರತಾಪಸಿಂಹ ನಾಯಕ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.