ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ದ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಮಾಡಿರಯವುದಾಗಿ ತಿಳಿದುಬಂದಿದೆ..

ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಹಾಗೂ ಬಂದರಿಗೆ ರಸ್ತೆ ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರನ್ನು ಎಫ್ .ಐ.ಆರ್ ಸಹ ದಾಖಲಿಸದೇ ಬಂಧಿಸಿ ಸಂಜೆವೇಳೆ ಬಿಡುಗಡೆ ಗೊಳಿಸಲಾಗಿತ್ತು.

ಈ ವೇಳೆ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೆ 6/05/22 ದೂರು ದಾಖಲಿಸಿದ್ದರು. ಈ ದೂರಿನನ್ವಯ 19/07/22 ರಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸುಮನ್ ಪೆನ್ನೇಕರ್ ರವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೇ ಪೊಲೀಸ್ ಇಲಾಖೆಯಿಂದ ಯಾವುದೇ ವರದಿ ಸಹ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಮನ್ಸ್ ಜಾರಿಮಾಡಲಾಗಿದೆ.

RELATED ARTICLES  ಫೆಬ್ರುವರಿ 3 ರಿಂದ 7ರ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ