ಭಟ್ಕಳ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿ ಫಾರೂಖ್ ಮಾಸ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸೋಮವಾರ ಭಟ್ಕಳದ ಮದೀನಾ ಕಾಲೋನಿಯ ವೆಲ್ಫೇರ್ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ತಾಹೀರ ಹುಸೇನ್ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿದೆ. ಆಸೀಫ್ ಶೇಖ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕಗೊಂಡಿದ್ದಾರೆ.

RELATED ARTICLES  ವರುಣ ಭಟ್ಟ ಕಡವೆ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ

ನೂತನವಾಗಿ ಆಯ್ಕೆಗೊಂಡ ಪಕ್ಷದ ಮುಖಂಡರನ್ನು ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಅಭಿನಂದಿಸಿದ್ದು ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡು ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಶ್ರಮಿಸಬೇಕೆಂದು ಹೇಳಿದರು.
ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳಿಗೆ ಪಕ್ಷದ ದ್ವಜವನ್ನು ನೀಡುವುದರ ಮೂಲಕ ಅಧಿಕಾರ ವಹಿಸಿಕೊಟ್ಟರು. ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಝೀಝ್ ಜಾಗರ‍್ದಾರ್, ರಾಜ್ಯ ಸಮಿತಿಯ ಮುಹಮ್ಮದ್ ಯೂನೂಸ್ ರುಕ್ನುದ್ದೀನ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

RELATED ARTICLES  ಕರ್ನಾಟಕ ಖಾಸಗಿ ವೈದ್ಯಕೀಯ ನಿಯಂತ್ರಣ ಕಾಯ್ದೆಯ ಸಾರ್ವಜನಿಕರಿಗೆ ಹಾಗೂ ವೈದ್ಯರ ಸೇವೆಗೆ ತೊಂದರೆ