ಶಿರಸಿ: ಹುಲೇಕಲ್ ಪಂಚಾಯಿತಿ ವ್ಯಾಪ್ತಿಯ ಔಡಾಳ ಸಮೀಪದ ಬಾದುಂಬೆಯಲ್ಲಿ ಯುವಕನೊಬ್ಬ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಲೋಕೇಶ್ ನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದು, ಮನೆಯ ಸಮೀಪ ವಿದ್ಯುತ್ ರಿಪೇರಿ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

RELATED ARTICLES  ಕೊಂಕಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ನಗರದ ರಾಘವೇಂದ್ರ ಸರ್ಕಲ್ ಬಳಿ ಚಿಕನ್ ಶಾಪ್ ಇಟ್ಟುಕೊಂಡಿದ್ದ ಈತನ ಅಕಾಲಿಕ ಮರಣವು ಕುಟುಂಬಕ್ಕೆ ಆಘಾತ ಉಂಟಾಗಿದೆ.

ಈ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

RELATED ARTICLES  ಮಲ್ಲಿಕಾರ್ಜುನ ದೇವ ಹಾಗೂ ಗಣಪತಿ ದೇವರ ದೃಢಸಂಪ್ರೋಕ್ಷಣೆ