ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದ ಬಾಲಕಿಯರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತಾರೀಖು 16.09.2022ರಂದು ಇನ್ನರ್ ವೀಲ್ ಕ್ಲಬ್ ಆಫ್ ಸಾಗರ್ ಯೂನಿಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ “ಮಹಿಳಾ ಆರೋಗ್ಯ ರಕ್ಷಣೆ ಮತ್ತು ಸಂವಾದ ಕಾರ್ಯಕ್ರಮ” ಯಶಸ್ವಿಯಾಗಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞ ವೈದ್ಯೆ ಡಾ.ಶ್ರೀಯಾ ಆರ್. ಭಾಗವತ್ ರವರು ಹೆಣ್ಣು ಮಕ್ಕಳ ಆರೋಗ್ಯ ಸಂರಕ್ಷಣೆ-ನಿರ್ವಹಣೆ ಕುರಿತು ಮನ ಮುಟ್ಟುವಂತೆ ವಿವರಿಸಿ ಒಂದು ಗಂಟೆಗಳ ಕಾಲ ಉಪನ್ಯಾಸ ನೀಡಿದರು. ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಯಶಸ್ವಿ ಸಂವಾದ ಕಾರ್ಯಕ್ರಮ ನಡೆಸಿ ಮೆಚ್ಚುಗೆ ಗಳಿಸಿದರು.

RELATED ARTICLES  ಕುಮಟಾದ ಮೂರೂರಿನಲ್ಲಿ ಕಾಣಿಸಿಕೊಂಡ ಹೆಬ್ಬಾವು! ಪುನಃ ಕಾಡು ಸೇರಿತು(ವಿಡಿಯೋ)

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿಯರಾದ ಅಪೇಕ್ಷಾ,ಅರ್ಚನಾ,ಸುಚಿ ಪ್ರಾರ್ಥಿಸಿದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಗುರುಪ್ರಸಾದ್ ಸ್ವಾಗತಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀ ವೆಂಕಟೇಶ ಜಿ.ಎಸ್. ಪ್ರಾಸ್ತಾವಿಕ ಮಾತನಾಡಿ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು.

RELATED ARTICLES  ನಿಮ್ಮ ರಾಶಿಯ ಪ್ರಕಾರ ಹೇಗಿದೆ ಗೊತ್ತಾ ಇಂದಿನ ದಿನ: ನಿಮಗೆ ಅದೃಷ್ಟ ತರುವ ಸಂಖ್ಯೆ ಯಾವುದು ಗೊತ್ತಾ? ಇಲ್ಲಿದೆ ನೋಡಿ.

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು,
ಇನ್ನರ್ ವೀಲ್ ಕ್ಲಬ್ ಸದಸ್ಯೆಯರು,ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡ ಕಾರ್ಯಕ್ರಮವನ್ನು ಶ್ರೀಮತಿ ಸುಶೀಲಾ ವೆಂಕಟೇಶ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಶ್ರೀಯಾ ಆರ್.ಭಾಗವತ್ ಅವರನ್ನು ಅಭಿನಂದಿಸಿ, ಸನ್ಮಾನಿಸಲಾಯಿತು.
ಕೊನೆಯಲ್ಲಿ ಶ್ರೀಮತಿ ಶಶಿಕಲಾ ಅಶ್ವತ್ ನಾರಾಯಣ್ ವಂದಿಸಿದರು.