ಗೋಕರ್ಣ: ಹನೇಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ.ಹಿ.ಪ್ರಾ ಶಾಲೆ ಹೊಸ್ಕೇರಿ ಕಡಿಮೆಯಲ್ಲಿ ನಡೆಯಿತು. ಕಿರಿಯರ ವಿಭಾಗದಲ್ಲಿ ಒಟ್ಟು ೧೪ ಹಾಗೂ ಹಿರಿಯರ ವಿಭಾಗದಲ್ಲಿ ೧೯ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹನೇಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಭಾರತಿ ಗೌಡ ಬಹುಮಾನ ವಿತರಿಸಿದರು.

ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಲ್.ಭಟ್ಟ್ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಘಟಿಸಿ ಆಯೋಜಿಸಿದ ಸಂಘಟಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಪ್ರತಿಭೆಗೆ ಇದೊಂದು ಉತ್ತಮ ವೇದಿಕೆಯಾಗಿದ್ದು ಮಕ್ಕಳ ಭಾಗವಹಿಸುವಿಕೆಗೆ ಪಾಲಕರು ಪ್ರೋತ್ಸಾಹಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮನ್ವಯಾಧಿಕಾರಿ ರೇಖಾ ನಾಯ್ಕರವರು ಕಾರ್ಯಕ್ರಮದ ಔಚಿತ್ಯದ ಕುರಿತು ನಮ್ಮ ಅನಿಸಿಕೆ ವ್ಯಕ್ತಪಡಿಸುತ್ತ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಡುಮಾಸ್ಕೇರಿ ಗ್ರಾಮಪಂಚಾಯತ ಅಧ್ಯಕ್ಷೆ ಧನಶ್ರೀ ಅಂಕೋಲೆಕರ ಕಾರ್ಯಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದರು.

RELATED ARTICLES  ರೌಡಿ ಶೀಟರ್ ಹಾಗೂ ಕಾಗೇರಿ ಮಾತುಕಥೆಯ ಫೋಟೋ ವೈರಲ್.

ಇದೇ ಸಂದರ್ಭದಲ್ಲಿ ಹಿಂದಿನ ಸಿ.ಆರ್.ಪಿ ಆರ್.ಟಿ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉತ್ತರಕನ್ನಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆನಂದು ಬಿ ಗಾಂವಕರ, ತಾಲೂಕಾಧ್ಯಕ್ಷ ರವೀಂದ್ರ ಭಟ್ಟ ಸೂರಿ, ಸದಸ್ಯ ಪ್ರಹ್ಲಾದ್ ಮಾಸ್ಕೇರಿ, ಶಾಲಾ ಎಸ.ಡಿ.ಎಮ್.ಸಿ ಅಧ್ಯಕ್ಷ ಸುಕ್ರು ಗೌಡ, ಬಿ.ಆರ್.ಪ ವಿನೋದ ನಾಯಕ, ಇ.ಸಿ.ಓ ದೀಪಾ ಕಾಮತ, ಇ.ಸಿ.ಓ ಉಮೇಶ ನಾಯ್ಕ, ಶಾಲಾ ಮುಖ್ಯಾಧ್ಯಾಪಕಿ ವಿದ್ಯಾ ಡಿ ನಾಯಕ ಹಾಜರಿದ್ದರು.

RELATED ARTICLES  ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ : ವಿವೇಕ ನಗರ ವಿಕಾಸ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ : ಉಪಯೋಗ ಪಡೆದ ೩೦೦ ಕ್ಕೂ ಹೆಚ್ಚು ಜನ.

ಹನೇಹಳ್ಳಿ ಸಿ.ಆರ್.ಪಿ ಮಂಜುಳಾ ನಾಯ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ವೈಶಾಲಿ ನಾಯಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಆನಂದ ಕೆ ನಾಯ್ಕ ವಂದಿಸಿದರು.

ವರದಿ: ಎನ್ ರಾಮು ಹಿರೇಗುತ್ತಿ