ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು ಎಂದು ತಿಳಿದುಬಂದಿದೆ.

ವಿಧಾನ ಪರಿಷತ್​ನಲ್ಲಿ ಭಗವದ್ಗೀತೆ ಬೋಧನೆ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು ಎನ್ನಲಾಗಿದೆ.

RELATED ARTICLES  ಪಾಕಿಸ್ಥಾನ ಭಾರತಕ್ಕೆ 2.86 ಲಕ್ಷ ಬಿಲ್ ಕೊಟ್ಟಿದ್ದು ಯಾಕೆ ಗೊತ್ತಾ?

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು ಎಂದು ವರದಿಯಾಗಿದೆ.

RELATED ARTICLES  ಶ್ರೀ ರಾಮಚಂದ್ರ ಪುರಮಠದಲ್ಲಿ ನೆಡೆಯಿತು - 'ವೃಕ್ಷ-ಜನನಿ' ಕಾರ್ಯಕ್ರಮ