ಯಲ್ಲಾಪುರ: ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಲಾರಿ ಪಲ್ಟಿಯಾದ ಘಟನೆ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ನಡೆದಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ರಸ್ತೆ ಪಕ್ಕದ ಗಟಾರದಲ್ಲಿ ಪಲ್ಟಿಯಾಗಿದೆ. ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಲಾರಿಯಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES  ಜಿಲ್ಲಾ ಹಂತದ ಹಾಲಕ್ಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

ಮಟ್ಕಾ ಆಡಿಸುತ್ತಿದ್ದವನ ಬಂಧನ


ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಡಿಸುತ್ತಿದ್ದ ವ್ಯಕ್ತಿಯನ್ನು ಶಿರಸಿ ನಗರಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ವಿದ್ಯಾಧಿರಾಜ ಕಲಾ ಕ್ಷೇತ್ರದ ಬಳಿ ನಡೆದಿದೆ. ರಮೇಶ ನಾಗು ಗೌಡ ಕಕ್ಕಳ್ಳಿ ಆರೋಪಿಯಾಗಿದ್ದಾನೆ. ಆರೋಪಿಯ ತನ್ನ ಲಾಭಕ್ಕೋಸ್ಕರ ವಿದ್ಯಾಧಿರಾಜ ಕಲಾ ಕ್ಷೇತ್ರದ ಬಳಿ ಓಸಿ ಮಟ್ಕಾ ಆಡುಸುತ್ತಿದ್ದ ವೇಳೆ ದಾಳಿ ನಡೆಸಿದ ಶಿರಸಿ ನಗರಠಾಣೆ ಪೊಲೀಸರು ಆರೋಪಿ ಹಾಗೂ
ಆಟಕ್ಕೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ನೇಣಿಗೆ ಶರಣಾದ ಹೆಗಡೆಯ ಯುವಕ : ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ