ಕಾರವಾರ: ಉತ್ತರಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಸರ್ಕಾರ ಕೊನೆಗೂ ಮಣಿದಿದ್ದು, ಬಹುದಿನದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜಿಲ್ಲೆಯ ಹೃದಯಭಾಗದಲ್ಲಿ ಮಾಡಲು ಆರೋಗ್ಯಸಚಿವರು, ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸರ್ಕಾರದಿಂದ ಕಳುಹಿಸಲಾಗಿದೆ. ಶಿಘ್ರವೇ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಕುರಿತು ಶೀಘ್ರದಲ್ಲೇ ಸರ್ಕಾರದಿಂದ ಅಧೀಕೃತ ಮಾಹಿತಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಅವರು ಉತ್ತರಕನ್ನಡದ ಸಂಸದರು, ಸಚಿವರ ಜೊತೆ ಸಭೆ ನಡೆಸಿದ ಬಳಿಕ ಈ ಕುರಿತು ಹೇಳಿಕೆ ನೀಡಿದ್ದಾರೆ. ಕಾರವಾರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಕುಮಟಾದಲ್ಲಿ ನಿರ್ಮಿಸಬೇಕೆಂದು ಸಲಹೆ ಬಂದಿದೆ. ಅಧಿವೇಶನ ಮುಗಿದ ಬಳಿಕ ಉತ್ತರಕನ್ನಡಕ್ಕೆ ಭೇಟಿ ನೀಡಲಿದ್ದೇನೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಅವರ ಮನೆಯಲ್ಲಿ ಇಂದು ಈ ಕುರಿತು ಮಹತ್ವದ ಸಭೆ ನಡೆದಿದ್ದು, ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಈ ಮಾಹಿತಿ ನೀಡಿದರು. ಈಗಾಗಲೇ ಕುಮಟಾದಲ್ಲಿ ಸ್ಥಳವನ್ನು ನಿಗದಿ ಮಾಡಲಾಗಿದ್ದು, ತಾವುಗಳು ನೀಡಿದ ಸಲಹೆಯಂತೆ ಖಾಸಗಿಯವರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು. ಅಧಿವೇಶನ ಮುಗಿದ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ಲೋಕಸಭಾ ಚುನಾವಣೆ: ಶೀಘ್ರದಲ್ಲೇ ಚುನಾವಣಾ ದಿನಾಂಕ ಘೋಷಣೆ!

ಅಧಿವೇಶನದ ನಂತರ ಸಿಎಂ ಉತ್ತರಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದು, ಈ ವೇಳೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಜಾಗವನ್ನು ಪರಿಶೀಲನೆ ಮಾಡಲಿದ್ದಾರೆ ಎಂದರು. ಅಲ್ಲದೆ, ಕಾರವಾರದ ಮೆಡಿಕಲ್ ಕಾಲೇಜ ಉನ್ನತ ದರ್ಜೆಗೆ ಏರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಣ ಸಚಿವ ಡಾ.ಸುಧಾಕರ ಸಮ್ಮತಿಸಿದ್ದಾರೆ.

RELATED ARTICLES  ನಾಳೆಯೂ ಉತ್ತರಕನ್ನಡದಲ್ಲಿ 40 ಸಾವಿರಕ್ಕೂ ಹೆಚ್ಚು ಕೊರೋನಾ ಲಸಿಕೆ ಲಭ್ಯ

ಇದನ್ನೂ ಓದಿ – ಬ್ಯಾಂಕ್ ಹಣದಲ್ಲಿಯೇ Online Game ಆಡಿದ ಬ್ಯಾಂಕ್ ಮ್ಯಾನೇಜರ್ : ಹೆಂಡತಿ ಖಾತೆಗೆ ಲಕ್ಷ ಲಕ್ಷ ಹಣ ವರ್ಗಾವಣೆ ಮಾಡಿದಾತ ಅರೆಸ್ಟ್.

ಉತ್ತರಕನ್ನಡ ಜಿಲ್ಲೆಯಲ್ಲಿ ಎಂಆರ್‌ಐ ಯಂತ್ರ ಸೇರಿದಂತೆ ಎಲ್ಲ ಸೌಲಭ್ಯ, ಕ್ಯಾನ್ಸರ್ ವಿಭಾಗ, ನ್ಯೂರೋ ವಿಭಾಗ ಮತ್ತಿತರ ತುರ್ತು ಚಿಕಿತ್ಸೆಗೆ ವ್ಯವಸ್ಥೆ, ಅಗತ್ಯ ತಜ್ಞ ವೈದ್ಯರು, ಅಗತ್ಯ ಉಪಕರಣ ಒದಗಿಸುವುದಾಗಿ ಭರವಸೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಧಿಕಾರಿಗಳ ತಂಡದೊoದಿಗೆ ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡಲಿದ್ದಾರೆ ಎಂದು ಸ್ಪಷ್ಪಪಡಿಸಿದ್ದಾರೆ.