ಶಿರಸಿ: ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸುಪ್ರೀಂ ಕೋರ್ಟನಲ್ಲಿನ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಅಂತಿಮ ವಿಚಾರಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ ಅವರುಗಳೊಂದಿಗೆ ಇಂದು ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಚರ್ಚಿಸಿದರು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಚರ್ಚೆಯ ಸಂದರ್ಭದಲ್ಲಿ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿನ ವೈಫಲ್ಯ ಸರಿಪಡಿಸುವುದು, ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಉತ್ತರ ಕನ್ನಡ ಜಿಲ್ಲಾ ಅರಣ್ಯ ಪ್ರದೇಶ ಸೇರ್ಪಡೆಗೆ ವಿರೋಧ, ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಅರಣ್ಯವಾಸಿ ಹೋರಾಟಗಾರರೊಂದಿಗೆ ಉನ್ನತ ಮಟ್ಟದ ಸಭೆ ಜರುಗಿಸುವುದು, ಸುಫ್ರೀಂ ಕೋರ್ಟನಲ್ಲಿ ರಾಜ್ಯ ಸರಕಾರ ಅರಣ್ಯವಾಸಿಗಳ ಪರ ಪ್ರಮಾಣ ಪತ್ರ ಸಲ್ಲಿಸುವುದು ಮುಂತಾದ ವಿಷಯಗಳ ಕುರಿತು ಗಮನ ಸೆಳೆಯಲಾಯಿತು ಎಂದು ಅವರು ತಿಳಿಸಿದ್ದಾರೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 27-02-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಅರಣ್ಯ ಅಧಿಕಾರಿಗಳ ದೌರ್ಜನ್ಯ ನಿಯಂತ್ರಿಸುವುದು, ಅರಣ್ಯವಾಸಿಗಳು ಸೌಲಭ್ಯದಿಂದ ವಂಚಿತರಾಗದ ರೀತಿ ಕಾರ್ಯನಿರ್ವಹಿಸುವುದು, ೧೯೭೮ ರ ಪೂರ್ವ ಅತಿಕ್ರಮಣದಾರರ ಹಕ್ಕು ಪತ್ರ ಶೀಘ್ರ ವಿಲೇವಾರಿ ಮಾಡುವುದು, ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿದವರನ್ನು ಮಂಜೂರಾತಿ ಪ್ರಕ್ರೀಯೆ ಮುಗಿಯುವರೆಗೂ ಒಕ್ಕಲೆಬ್ಬಿಸಿರುವ ಪ್ರಕ್ರೀಯೆ ಸ್ಥಗಿತಗೊಳಿಸುವುದು, ಅರಣ್ಯವಾಸಿಗಳ ಮೇಲೆ ದಾಖಲಿಸಿದ ಕ್ರೀಮಿನಲ್ ಪ್ರಕರಣ ಹಿಂದಕ್ಕೆ ಪಡೆಯುವುದು ಮುಂತಾದ ವಿಷಯಗಳ ಕುರಿತು ಚರ್ಚೆಯ ಸಂದರ್ಭದಲ್ಲಿ ರವೀಂದ್ರ ನಾಯ್ಕ ಪ್ರಸ್ತಾಪಿಸಿದರು.
ಅರಣ್ಯ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಗಂಬೀರವಾಗಿ ಪರಿಗಣಿಸಲಾಗುವುದು, ಅಲ್ಲದೇ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸದ ದಿಶೆಯಲ್ಲಿ ಪ್ರಯತ್ನಿಸಲಾಗುವುದೆಂದು ವಿರೊಧ ಪಕ್ಷದ ನಾಯಕರುಗಳಾದ ಸಿದ್ಧರಾಮಯ್ಯ ಹಾಗೂ ಬಿ.ಕೆ ಹರಿಪ್ರಸಾದ ತಿಳಿಸಿದ್ದಾರೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

RELATED ARTICLES  ಭಾರತ–ಮ್ಯಾನ್ಮಾರ್ ಗಡಿಯಲ್ಲಿ ಗುಂಡಿನ ಚಕಮಕಿ