ಶಿರಸಿ : ಉತ್ತರ ಕನ್ನಡದಲ್ಲಿ ಆತ್ಮಹತ್ಯೆ ಪ್ರಕರಣಗಳು ಮುಂದುವರಿಯುತ್ತಿದ್ದು, ಗ್ರಾಮ ಪಂಚಾಯತ್ ನಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ತಾಲೂಕಿನ ಹೆಗಡೆಕಟ್ಟಾ ಗ್ರಾಮ ಪಂಚಾಯತದಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 25 ವರ್ಷದ ದಯಾನಂದ್ ಹರಿಜನ ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

RELATED ARTICLES  ನೂರು ಬಾರಿ ಸುಳ್ಳು ಹೇಳಿ, ಸುಳ್ಳನ್ನೇ ಸತ್ಯ ಮಾಡುವ ಬಿ.ಜೆ.ಪಿ : ರವಿಶಂಕರ ಶೇರಿಗಾರ್

ಒನ್ ಸೈಡ್ ಪ್ರೇಮ ಪ್ರಕರಣ ಎಂಬುದು ಸಾರ್ವಜನಿಕ ವಲಯದಲ್ಲಿ ಅಲ್ಲಲ್ಲಿ ಮಾತುಗಳು ಕೇಳಿ ಬರುತ್ತಿದ್ದು ಪೊಲೀಸ್ ತನಕ್ಕೆ ನಂತರದಲ್ಲಿಯೇ ನಿಖರ ಕಾರಣ ತಿಳಿದು ಬರಬೇಕಿದೆ.

ವೈಯಕ್ತಿಕ ಸಮಸ್ಯೆಗಳಿಂದ ಮನನೊಂದಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದಾಗಿ ಕೆಲವು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕುಟುಂಬದವರು ಈ ಘಟನೆಯಿಂದ ಮನನೊಂದಿದ್ದು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES  ಯಲ್ಲಾಪುರದಲ್ಲಿ ಭೀಕರ ಅಪಘಾತ : ಇಬ್ಬರು ಪೊಲೀಸರು ಆಸ್ಪತ್ರೆಗೆ ದಾಖಲು