ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವರವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಏಮ್ಸ್ ಯಲ್ಲಿ ಆಸ್ಪತ್ರೆಗೆ ಅನಾರೋಗ್ಯದ ಕಾರಣದಿಂದಾಗಿ ಅವರನ್ನು ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿ ಇದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ.

RELATED ARTICLES  ಸ್ಯಾಂಡಲ್ ವುಡ್ ಗೆ ಇನ್ನೊಂದು ಆಘಾತ : ಹಿರಿಯ ನಟ ರಾಜೇಶ್ ಇನ್ನಿಲ್ಲ.

ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗ ರಾಜು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 10ರಂದು ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಈವರೆಗೂ ಅವರಿಗೆ ಪ್ರಜ್ಞೆ ಮರಳಿ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ಕನ್ಯಾಸಂಸ್ಕಾರ ದ ಕುರಿತು ಹೇಳಿಕೆ ನೀಡದಂತೆ ಪ್ರತಿಬಂಧಕಾಜ್ಞೆ