ಶಿರಸಿ : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಬಂಧಿತ PFI ಸದಸ್ಯರು ಹಾಗೂ ಉಗ್ರನ ಬಂಧನದಲ್ಲಿ ಶಿರಸಿಯ PFI ಮುಖಂಡರ ಹೆಸರು ಕೇಳಿಬಂದಿತ್ತು. ಇದರ ಹಿನ್ನಲೆಯಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಕೇಂದ್ರ ಗುಪ್ತದಳ ವಿಭಾಗದ ಅಧಿಕಾರಿಗಳು,ಎನ್.ಐ.ಎ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

RELATED ARTICLES  ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳ ಹಾವಳಿ : ಪರಸ್ಪರ ಕೆಸರೆರಚಾಟ.

ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಟಿಪ್ಪುನಗರದ ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಮುಂಜಾನೆ 3.30 ರಿಂದಲೇ ಅಬ್ದುಲ್ ಮನೆಯ ಬಳಿ ಪೊಲೀಸರ ದಂಡೇ ನೆರೆದಿತ್ತು. ಸುಮಾರು 6 ಗಂಟೆಯ ವೇಳೆಗೆ ಈತನ ಮನೆಗೆ ಅಧಿಕಾರಿಗಳು ತೆರಳಿದ್ದು, ಈ ವೇಳೆ ಒಂದು ಲ್ಯಾಪ್ ಟಾಪ್, 2 ಮೊಬೈಲ್, ಪುಸ್ತಕಗಳು ಹಾಗೂ ಒಂದು ಸಿಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.‌