ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದೇ ಸೋಮವಾರದಿಂದ ಉದ್ಘಾಟನೆಯಾಗಲಿದೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟನೆ ಮಾಡುತ್ತಿರುವುದು ವಿಶೇಷ ವಾಗಿದೆ. ಸೆಪ್ಟೆಂಬರ್ 26 ರಂದು ರಾಷ್ಟ್ರಪತಿ ದೌಪದಿ ಮುರ್ಮು ರವರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು ಜಿಲ್ಲಾಡಳಿತವು ರಾಷ್ಟ್ರಪತಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಷ್ಟ್ರಪತಿ ದೌಪದಿ ಮುರ್ಮು ಅವರ ಕಾರ್ಯಕ್ರಮದ ವಿವರ ಬಿಡುಗಡೆ ಮಾಡಿದೆ ಎನ್ನಲಾಗಿದೆ.

ಸೆಪ್ಟೆಂಬರ್ 6 ರಂದು ಸೋಮವಾರ ಬೆಳಗ್ಗೆ 6:15ಕ್ಕೆ ರಾಷ್ಟ್ರಪತಿ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ನೇರವಾಗಿ ಬೆಳಗ್ಗೆ 9 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಅಲ್ಲಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ ತಲುಪಿ, ಬೆಳಗ್ಗೆ 10ಕ್ಕೆ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ಶಾಲಾ ಮಕ್ಕಳ ಪ್ರವಾಸದ ಬಸ್ ಅಪಘಾತ