ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದ ಬಳಿಕ ಇಲಾಖೆಯು ಸಿಇಟಿ ನಡೆಸಿ ಈಗಾಗಲೆ ಅಭ್ಯರ್ಥಿಗಳ ಫಲಿತಾಂಶ ಪ್ರಕಟಿಸಿದೆ. ಶಿಕ್ಷಕರ ನೇಮಕಾತಿಗೆ ಆಯ್ಕೆ ಪಟ್ಟಿಸಿದ್ಧಪಡಿಸುತ್ತಿದ್ದು, ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್ /ಏಪ್ರಿಲ್ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಸುಮಾರು 1,00683 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಹೆಚ್ಚುವರಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪ್ರತಿಯೊಬ್ಬರ ಕಿವಿ ಒಲೆ, ವಾಚ್ ಎಲ್ಲವನ್ನು ಚೆಕ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ಹೋಗಲು ಅನುಮತಿ ನೀಡಲಾಗಿತ್ತು. ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದ್ದು, ಮೊಬೈಲ್ ಪೋನ್, ಬ್ಲೂಟೂತ್, ಡಿಜಿಟಲ್ ಸಾಮಾಗ್ರಿ, ಕೈಗಡಿಯಾರಕ್ಕೆ ಪರೀಕ್ಷಾ ಕೇಂದ್ರದಲ್ಲಿ ಅನುಮತಿ ನೀಡಿರಲಿಲ್ಲ.