ದಾಂಡೇಲಿ : ಯುಜಿಡಿ ಗುತ್ತಿಗೆ ಸಂಸ್ಥೆಯ ಕಾರ್ಮಿಕನೋರ್ವ ನೇಣಿಗೆ ಶರಣಾದ ಘಟನೆ ನಗರದ ಅಂಬೇವಾಡಿಯಲ್ಲಿ ನಡೆದಿದೆ. ನಗರದ ಯುಜಿಡಿ ಗುತ್ತಿಗೆ ಸಂಸ್ಥೆಯಲ್ಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ರಾಂಚಿ, ಜಾರ್ಖಾಂಡ್ ಮೂಲದ ಸೋಮಾ ಮುಂಡ ಎಂಬ 37 ವರ್ಷ ವಯಸ್ಸಿನ ವ್ಯಕ್ತಿಯೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ ಎಂದು ಸ್ಥಳೀಯ ಪತ್ರಿಕೆ ವರದಿಮಾಡಿದೆ.

RELATED ARTICLES  ಕುಮಟಾ : ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ವಿತರಿಸಿದ ಶಾಸಕ ದಿನಕರ ಶೆಟ್ಟಿ

ಕುಡಿತದ ಚಟಕ್ಕೆ ಈದ ಬಲಿಯಾಗಿದ್ದ ಎನ್ನಲಾಗಿದೆ. ಕುಡಿತದ ಚಟ ಅಂಟಿಕೊಂಡಿದ್ದಾನೆಂದು ಮೂಲಗಳಿಂದ ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಪಿಎಸೈ ಕಿರಣ್ ಪಾಟೀಲ, ಎಎಸೈಗಳಾದ ಬಸವರಾಜ ಒಕ್ಕುಂದ, ಮೆಹಬೂಬ ನಿಂಬುವಾಲೆ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.