ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಹತ್ತಿರದ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಉಸಿರಾಟದ ಬೆಂಬಲ ಸ್ಥಿತಿಯಲ್ಲಿ ಅವರಿದ್ದು ಉಳಿದಂತೆ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಗಮನಿಸುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ – ತಾಯಿಯನ್ನು ನೋಡಲು ಮನೆಗೆ ಬಂದ ವಿದ್ಯಾರ್ಥಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ..!
ಕೃಷ್ಣ ಅವರಿಗೆ ಚಿಕಿತ್ಸೆ ನೀಡುವ ತಂಡದಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಸತ್ಯನಾರಾಯಣ ಮೈಸೂರು ಮತ್ತು ವಿಭಾಗದ ಮುಖ್ಯಸ್ಥ ಡಾ ಸುನೀಲ್ ಕಾರಂತ್ ಕೂಡ ಇದ್ದಾರೆ.