ಭಟ್ಕಳ: ಅಂದಾಜು 6-7 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಅಲ್ಲೇ ಇದ್ದ ಮುಸ್ಲಿಂ ಯುವಕರು ಸುರಕ್ಷಿತವಾಗಿ ಹೆಬ್ಬಾವು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿರುವ ಘಟನೆ ಇಲ್ಲಿನ ಮಣ್ಕುಳಿಯ ಪೆಟ್ರೋಲ್ ಪಂಪ್ ಸಮೀಪ ನಡೆದಿದೆ.
ಮಣ್ಕುಳಿಯ ಪೆಟ್ರೋಲ್ ಪಂಪ್ ಸಮೀಪ ಚರಂಡಿಯಲ್ಲಿ ದೊಡ್ಡ ಗ್ರಾತ್ರದ ಹೆಬ್ಬಾವು ಇರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಸಂಪರ್ಕಿಸುವಷ್ಟರಲ್ಲಿ ಅಲ್ಲೇ ಇದ್ದ ಮುಸ್ಲಿಂ ಯುವಕರ ತಂಡ ಸುರಕ್ಷಿತವಾಗಿ ಹೆಬ್ಬಾವು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.