ಕಾರವಾರ : ಒಂದೆಡೆ ದೇಶದ ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದರೆ, ಇತ್ತ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಭಟ್ಕಳದಲ್ಲಿ ಪಿಎಫ್‌ಐ ಸಂಘಟನೆ ಸದಸ್ಯರು ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಿರಸಿಯ ನೆಹರೂ ನಗರದ ನಿವಾಸಿ
ಪಿಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಹಾಗೂ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಗಫೂರ್ ಮನೆಯಲ್ಲಿ ಶೋಧ ನಡೆಸಿದ್ದು ಮೊನ್ನೆಯಷ್ಟೇ ಈತನನ್ನು ವಶಕ್ಕೆ ಪಡೆದು ಕಲಂ 107 ದಾಖಲಿಸಿ ಬಿಡುಗಡೆ ಮಾಡಲಾಗಿದೆ.
ಶಿರಸಿಯ ತಹಶೀಲ್ದಾರ್ ಶ್ರೀಧರ್, ಡಿವೈಎಸ್‌ಪಿ ರವಿ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇದೇ ರೀತಿ ಕಾರ್ಯಾಚರಣೆ ಮುಂದುವರೆಯುವ ಲಕ್ಷಣಗಳು ಕಾಣುತ್ತಿದ್ದು, ಪೊಲೀಸ್ ಇಲಾಖೆ ಸಮಗ್ರವಾಗಿ ಇವುಗಳನ್ನು ಪರಿಶೀಲಿಸುತ್ತಿದೆ ಎನ್ನಲಾಗಿದೆ.