ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಗ್ರೂಪ್ ಸಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 20 ಲೇಬರ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 29ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 20 ಲೇಬರ್ ಇನ್ಸ್ಪೆಕ್ಟರ್ ಹುದ್ದೆ ಖಾಲಿ ಇದೆ. ಕರ್ನಾಟಕದಲ್ಲಿಯೇ ಹುದ್ದೆಗಳಿದ್ದು, ವೇತನ ತಿಂಗಳಿಗೆ 33450-62600 ರೂಪಾಯಿ ಇದೆ.

ಈ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು ವಯೋಮಿತಿಯಲ್ಲಿದೆ.

RELATED ARTICLES  QR Code Scan ಮಾಡುವಾಗ ಇರಲಿ ಎಚ್ಚರ.

ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ. ಮಾಜಿ ಸೈನಿಕ ಅಭ್ಯರ್ಥಿಗಳು: .85 v ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ. ಸಾಮಾನ್ಯ ಅಭ್ಯರ್ಥಿಗಳು: 635 ರೂಪಾಯಿ ಇರಲಿದೆ.

ಸೆಪ್ಟೆಂಬರ್ 30 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. kpsc.kar.nic.in ಈ ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

RELATED ARTICLES  ನಾಳೆ ಕುಮಟಾದಲ್ಲಿ ಉದ್ಘಾಟನೆಯಾಗಿಲಿದೆ "ಮಯೂರಿಕಾ" ಬಟ್ಟೆ ಮಳಿಗೆ