ಭಟ್ಕಳ: ಉತ್ತರ ಕನ್ನಡದ ಹಲವು ತಾಲೂಕಿನಲ್ಲಿ ಗಾಂಜಾ ಮಾರಾಟ ಪ್ರಕರಣಗಳು ಪೊಲೀಸರ ಬಲೆಗೆ ಬೀಳುತ್ತಿದ್ದು, ಆರೋಪಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಜಾಲಿ ರೋಡ್ ಕೋಲಾ ಗ್ರೌಂಡ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಇಬ್ಬರು ಆರೋಪಗಳನ್ನು ಡಿವೈಎಸ್ಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

RELATED ARTICLES  `ವಿದ್ವಾನ್-ಗಾನ-ಸಂಮಾನ’ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ 29ಕ್ಕೆ

ಇದನ್ನೂ ಓದಿ – ಬೈಕ್ ಇಟ್ಟು ಹೋಗಿದ್ದ ವ್ಯಕ್ತಿ : ವಾಪಸ್ ಬಂದು ನೋಡಿದಾಗ ಕಾದಿತ್ತು ಶಾಕ್..!

ಶೋಭರಾಜ ಓಡ, ಬಲರಾಮ ಓಡ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಒಟ್ಟು ಸುಮಾರು 10,000 ರೂಪಾಯಿ ಬೆಲೆಬಾಳುವ 406 ಗ್ರಾಂ ತೂಕದ ಗಾಂಜಾವನ್ನು ಅಕ್ರಮವಾಗಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.