ಕಾರವಾರ : 2017 ರ ಡಿಸೆಂಬರ್ 6 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಪರೇಶ್ ಮೇಸ್ತಾ. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಇದು ಗಲಭೆಗೂ ಕಾರಣವಾಗಿತ್ತು. ಇದೀಗ ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಂಬಂಧ ಸಿಬಿಐ ನಿಂದ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಆಕಸ್ಮಿಕವಾಗಿ ಸಾವು ಎಂದು ಸಿಬಿಐ ವರದಿ ಸಲ್ಲಿಸಿದೆ.

RELATED ARTICLES  ವಾಟ್ಸ್‌ಆಪ್ ಸ್ಟೇಟಸ್ ತೆರೆದರೆ ಇನ್ಮುಂದೆ ಕಾಣಿಸಲಿದೆಯೇ ಜಾಹಿರಾತು??? ಯೂ ಟರ್ನ ಹೊಡೆಯುತ್ತಿದೆ ವಾಟ್ಸ್‌ಆಪ್ !

ಇಂದು ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು, ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16 ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ.

RELATED ARTICLES  ಕುಮಟಾ : ಅಪರಿಚಿತ ವಾಹನ ಬಡಿದು ಚಿರತೆ ಸಾವು.

ಪ್ರಕರಣ ನಡೆದ ಸಂದರ್ಭದಲ್ಲಿ ಅಂದಿನ ಸಿದ್ದರಾಮಯ್ಯ ಸರ್ಕಾರ ಪ್ರಕರಣವನ್ನು ಸಿಬಿಐ ಗೆ ವಹಿಸಿತ್ತು. ಐದು ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐ ನಿಂದ ವರದಿ ಸಲ್ಲಿಕೆಯಾಗಿದೆ.