ಹೊನ್ನಾವರ : ಪರೇಶ ಮೇಸ್ತ ಸಾವಿನ ಕುರಿತಂತೆ ಅನಗತ್ಯವಾಗಿ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಹೊರಿಸಿದ್ದ ಬಿ.ಜೆ.ಪಿ. ಪಕ್ಷ ಮತ್ತು ಅವರ ನಾಯಕರ ನಿಲುವಿನ ಕುರಿತಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣಾ ನಾಯ್ಕ ನೇತ್ರತ್ವದಲ್ಲಿ ದಿ.೭ ಶುಕ್ರವಾರ ಮುಂಜಾನೆ ೧೦ ಗಂಟೆಗೆ ಹೊನ್ನಾವರ ಪಟ್ಟಣದ ಶರಾವತಿ ವೃತ್ತದ ಬಳಿ ಜನ ಜಾಗೃತಿ ಸಭೆ ಏರ್ಪಡಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ತಿಳಿಸಿದ್ದಾರೆ.

RELATED ARTICLES  ಕೊಂಕಣ ಎಜ್ಯುಕೇಶನ್ ಟ್ರಸ್ಟ ನ ಶಿಕ್ಷಕರಿಗೆ ಸನ್ಮಾನ.

ಜನ ಜಾಗೃತಿ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಐವಾನ್ ಡಿ’ಸೋಜಾ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ, ಮಾಜಿ ಶಾಸಕರಾದ ಮಂಕಾಳ ವೈದ್ಯ ಮತ್ತು ಸತೀಶ ಸೈಲ್, ಕೆ.ಪಿ.ಸಿ.ಸಿ. ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ೧೪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಜಿಲ್ಲಾ ಆಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಪಕ್ಷದ ಎಲ್ಲಾ ಸ್ತರದ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

RELATED ARTICLES  ಕುಮಟಾದ ಮುನಸಿಪಲ್ ವ್ಯಾಯಾಮ ಶಾಲೆ ವಿದ್ಯಾರ್ಥಿ ಸಚಿನ್ ಗೆ ನೀವು ಬೆಂಬಲಿಸಿ

ಇದನ್ನೂ ಓದಿ : ಜಿಜೆಪಿ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ. : ಭೀಮಣ್ಣ ನಾಯ್ಕ

ಕಾರಣ ಅತ್ಯಂತ ಮಹತ್ವಪೂರ್ಣವಾದ ಈ ಜನಜಾಗೃತಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.