ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರಕಾರ ಭರವಸೆ ನೀಡಿದ್ದು, ಜಿಲ್ಲಾಧಿಕಾರಿಗಳೂ ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೀಗ, ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅಕ್ಟೋಬರ್ 11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲೆಗೆ ಆರೋಗ್ಯ ಸಚಿವರು ಆಗಮಿಸಲಿದ್ದಾರೆ. ಸೂಪರ್ ಸ್ಪೆಷಾಲಿಟಿ ಯಾವ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬುದರ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದು. ಈ ವೇಳೆ ಜಾಗ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

RELATED ARTICLES  ಗುಂಡು ಹಾರಿಸಿ ಮಗನನ್ನೇ ಕೊಲ್ಲಲು ಯತ್ನಿಸಿದ ಅಪ್ಪ

ವಿಧಾನಸಭಾ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು , ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಆಗ್ರಹಿಸಿ, ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಸೆಳೆದಿದ್ದರು. ಈ ವೇಳೆ ಸಿಎಂ ಮತ್ತು ಆರೋಗ್ಯ ಸಚಿವರು, ಆಸ್ಪತ್ರೆಗೆ ನಿರ್ಮಿಸುವ ಭರವಸೆ ನೀಡಿ, ಸ್ಥಳ ಪರಿಶೀಲನೆಗೆ ಆಗಮಿಸುವುದಾಗಿ ತಿಳಿಸಿದ್ದರು.

RELATED ARTICLES  ಬೈಕ್ ಕಳವು ಪ್ರಕರಣ ಆರೋಪಿಗೂ ಕೊರೋನಾ ಪಾಸಿಟೀವ್ : ಶಿರಸಿ ಪೋಲೀಸರಲ್ಲಿ ಆತಂಕ..!

ಇದೇ ವೇಳೆ, ಕಾರವಾರದ ಮೆಡಿಕಲ್ ಕಾಲೇಜಿಗೆ ಆಗಮಿಸಿ 160 ಕೋಟಿ ರೂಪಾಯಿ ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.