ಕಾರವಾರ : ವಸತಿ ಶಾಲೆಯಲ್ಲಿ ಆರ್ ಎಸ್ ಎಸ್ ಪ್ರಶಿಕ್ಷಣ ಶಿಬಿರ ಆಯೋಜನೆಗೆ ವಿರೋಧ ವ್ಯಕ್ತವಾಗಿರುವ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಯಾವುದೇ ಉತ್ತಮ ಸಂದೇಶ ಕೊಡುವ ಯಾವುದೇ ಸಂಸ್ಥೆಗಳಿದ್ದರೂ ಅನುಮತಿ ಕೊಡುತ್ತೇವೆ. ನಿಷೇಧಿತ ಯಾವುದೇ ಸಂಸ್ಥೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

RELATED ARTICLES  ಬಿಜೆಪಿ ಅಭ್ಯರ್ಥಿ ಶಿವರಾಮ‌ ಹೆಬ್ಬಾರ್ ಜಯಭೇರಿ.

ಕಾರವಾರದಲ್ಲಿ ಮಾತನಾಡಿದ ಅವರು, ದಸರಾ ರಜೆ ಸಮಯದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ರಜೆ ಕೊಡುತ್ತೇವೆ. ರಜೆ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ ನಡೆಸಲು ಎನ್ಎಸ್ಎಸ್ ನಂತೆ ಅನೇಕ ಸಂಘ- ಸಂಸ್ಥೆಗಳು ಕೂಡ ಅನುಮತಿ ಕೇಳುತ್ತವೆ. ದೇಶ ಮೊದಲು ಎನ್ನುವ ಯಾವುದೇ ಸಂಸ್ಥೆಗೆ ಅವಕಾಶ ಕೊಡುತ್ತೇವೆ, ಇದು ಮೊದಲಿನಿಂದಲೂ ವಾಡಿಕೆ ಎಂದರು.

ಇದನ್ನೂ ಓದಿ – ಪರೇಶ ಮೆಸ್ತಾ ಸಾವಿನ ಪ್ರಕರಣದ ತನಿಖೆಯನ್ನು ಪುನರ್ ಪರಿಶೀಲಿಸಲು ಮನವಿ..?

RELATED ARTICLES  ಭಟ್ಕಳಕ್ಕೆ ಆಗಮಿಸಿದ ಶೋಭಾ ಕರಂದ್ಲಾಜೆ ಮೃತನ ಕುಟುಂಬಕ್ಕೆ ಸಾಂತ್ವಾನ.

ಆರ್ ಎಸ್ ಎಸ್ ಶಿಬಿರ ನಡೆಸಲು ನಾವು ಶಾಲೆಗಳನ್ನು ಕೊಟ್ಟಿಲ್ಲ. ಹೀಗಾಗಿ ಅದು ತಪ್ಪೋ, ಸರಿಯೋ ಅನ್ನೊ ಪ್ರಶ್ನೆಯೇ ಬರುವುದಿಲ್ಲ. ಟೀಕೆ ಮಾಡುವವರು ಇದರ
ಬಗ್ಗೆ ಸರಿಯಾದ ಮಾಹಿತಿ ತಿಳಿದು ಟೀಕೆ ಮಾಡಲಿ ಎಂದು ಅವರು ಪ್ರತಿಕ್ರಿಯೆ ನೀಡಿದರು.