ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕ್‌ ಆದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಪ್ರೊಬೇಷನರಿ ಆಫೀಸರ್‌ (PO) ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್‌ 12 ಕೊನೆಯ ದಿನವಾಗಿರುತ್ತದೆ.

ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಅ.೧೨ರ ಮಧ್ಯರಾತ್ರಿಯ ಒಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಶುಲ್ಕವನ್ನೂ ಆನ್‌ಲೈನ್‌ನಲ್ಲಿಯೇ ಪಾವತಿಸಬಹುದಾಗಿರುತ್ತದೆ.

ಈ ಬಾರಿ ಒಟ್ಟು 1,673 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಈ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 270, ಎಸ್‌ಟಿ ಅಭ್ಯರ್ಥಿಗಳಿಗೆ 131, ಒಬಿಸಿ ಅಭ್ಯರ್ಥಿಗಳಿಗೆ 464 ಹಾಗೂ ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 160 ಹುದ್ದೆಗಳನ್ನು ಮೀಸಲಿಡಲಾಗಿದೆ. ಉಳಿದ 648 ಹುದ್ದೆಗಳು ಸಾಮಾನ್ಯ ಅಭ್ಯರ್ಥಿಗಳಿಗೆ ದೊರೆಯಲಿವೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದ್ದು, ಅವರು 31-12-2022ರ ಒಳಗೆ ಪದವಿ ಪಡೆದಿರುವ ದಾಖಲೆಯನ್ನು ಸಂದರ್ಶನದ ಸಂದರ್ಭದಲ್ಲಿ ಹಾಜರು ಪಡಿಸಬೇಕಿರುತ್ತದೆ.

RELATED ARTICLES  ಸಿ.ಇ.ಟಿ ಫಲಿತಾಂಶ ಪ್ರಕಟ : ವಿವರ ಇಲ್ಲಿದೆ ನೋಡಿ.

ಇದನ್ನೂ ಓದು – ರೈತರಿಗೆ ಇಲ್ಲಿದೆ ಶುಭ ಸುದ್ದಿ : ವಿವರ ಓದಿ.

21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯನ್ನು ದಿನಾಂಕ 01-04-2022 ಕ್ಕೆ ಲೆಕ್ಕ ಹಾಕಲಾಗುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 750 ರೂ.ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಬಹುದಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿರುತ್ತದೆ.

ಬೇಸಿಕ್‌ ವೇತನ 41,960 ರೂ. ಗಳಾಗಿದ್ದು, ವೇತನ ಶ್ರೇಣಿ ಇಂತಿದೆ: ರೂ.36,000-14,90/7-46,430-1,740/2-49,910-1,990/7-63,840. ಇದಲ್ಲದೆ, ಡಿಎ/ಎಚ್‌ಆರ್‌ಎ, ಮೆಡಿಕಲ್‌ ಇನ್ನಿತರ ಭತ್ಯೆಗಳೂ ಇರುತ್ತವೆ.

RELATED ARTICLES  ಉತ್ತರಕನ್ನಡದ ಹಲವೆಡೆ ಇಳೆಗೆ ತಂಪೆರೆದ ವರುಣ.

ಮೂರು ಹಂತದ ನೇಮಕ ಪ್ರಕ್ರಿಯೆ ಮೂಲಕ ಈ ಹುದ್ದೆಗಳಿಗೆ ನೇಮಕ ನಡೆಯಲಿದೆ. ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ, ಇದರಲ್ಲಿ ಅರ್ಹತೆ ಪಡೆದವರಿಗೆ ಮೂಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ಮುಖ್ಯ ಪರೀಕ್ಷೆ ಮತ್ತು ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ರಾಜ್ಯದ ಬೆಳಗಾವಿ, ಬೆಂಗಳೂರು, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.