ಕಾರವಾರ: ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ‌ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ. ಕುಮಟಾ ಸಮೀಪದ ಮಿರ್ಜಾನದಲ್ಲಿ ಸ್ಥಳ ವೀಕ್ಷಣೆ ಮಾಡಿದ ನಂತರದಲ್ಲಿ ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು. ಮಿರ್ಜಾನ್ ನ ಈ ಸ್ಥಳ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತವಾಗಿದೆ ಎಂಬುದು ಸ್ಥಳೀಯ ಮುಖಂಡರ ಅನಿಸಿಕೆ ಎಂದು ಅವರು ತಿಳಿಸಿದರು.

ವಿಡಿಯೋ ನೋಡಿ

ಸ್ಥಳ ವೀಕ್ಷಣೆಗೂ ಪೂರ್ವ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಟಾಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಗೆ ತೆರಳುತ್ತಿದ್ದು, ಸ್ಥಳ ಯೋಗ್ಯವಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಮಂಜೂರಾತಿ ಪಡೆದು ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತೇವೆ. ಇಡೀ‌ ಜಿಲ್ಲೆಯ ಜನರಿಗೆ ಉಪಯೋಗ ಆಗುವಂತಹ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

RELATED ARTICLES  ಪುನೀತನ ಜೊತೆ ಕುಳಿತ ಗಣಪ : ವಿಭಿನ್ನ ಕಲ್ಪನೆಗೆ ಜನ ಮೆಚ್ಚುಗೆ

ಖಾಸಗಿ ಬಗ್ಗೆ ನಾವೆಲ್ಲೂ ಮಾತನಾಡಿಲ್ಲ. ಖಾಸಗಿಯವರು ನೋಡಿಕೊಂಡು ಹೋಗಿದ್ದರೆ ಅದು ನನಗೆ ಗೊತ್ತಿಲ್ಲ. ಆದರೆ ಒಟ್ಟಾರೆ ಜನತೆಯ ಬೇಡಿಕೆಯಂತೆ ಅಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆಯೂ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ – ವಸತಿ ಶಾಲೆಗಳಲ್ಲಿ ಆರ್.ಎಸ್.ಎಸ್ ಶಿಬಿರ ಆಯೋಜನೆ ಬಗ್ಗೆ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದೇನು?

ಸಚಿವ ಸುಧಾಕರ ಅವರು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಶಿವರಾಮ ಹೆಬ್ಬಾರ ಹಾಗೂ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ್ದರು. ಹಾಗೂ ಶೀಘ್ರವೇ ಉತ್ತರ ಕನ್ನಡಕ್ಕೆ ಆಗಮಿಸಿ ಸ್ಥಳ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು. ಹಾಗೂ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದರು.

RELATED ARTICLES  ವಾಟ್ಸ್‌ಆಪ್‌ನಲ್ಲಿ ಎಲ್ಲರಿಗೂ ಲಭ್ಯವಾಯ್ತು ಗ್ರೂಪ್ ವಿಡಿಯೋ ಕಾಲ್ ಆಯ್ಕೆ..! ಅದು ಹೇಗೆ ಅಂತೀರಾ? ಇಲ್ಲಿದೆ ನೋಡಿ ಮಾಹಿತಿ.

ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಾನ್ಯ ಕೋಟ ಶ್ರೀನಿವಾಸ ಪೂಜಾರಿ, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ದಿನಕರ ಶೆಟ್ಟಿ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಶ್ರೀಮತಿ ರೂಪಾಲಿ ನಾಯ್ಕ್, ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಸರ್ಕಾರಿ ಅಧಿಕಾರಿಗಳು, ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳು ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು