ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.

ಇದೀಗ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ.

RELATED ARTICLES  ಗ್ರಹಣಕಾಲದಲ್ಲಿಯೂ ಗೋಕರ್ಣ ಮಹಾಬಲೇಶ್ವರನ ದರ್ಶನ

ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.

RELATED ARTICLES  Job News - 3484 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಈ ಮೂಲಕ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ.