ಕಾರವಾರ : ಕಾರವಾರ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ಸಿಲೆಂಡರ್ ಸ್ಪೋಟಗೊಂಡ ಪರಿಣಾಮವಾಗಿ, ಬೆಳ್ಳಂಬೆಳಗ್ಗೆ ಅಗ್ನಿ ಅವಘಡವೊಂದು ಸಂಭವಿಸಿ ಸುತ್ತಲ ಜನರಲ್ಲಿ ಭಯದ ವಾತಾವರಣ ಮೂಡಿಸಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಘಟನೆಯಿಂದಾಗಿ 25ಕ್ಕೂ ಅಧಿಕ ಕಾರ್ಮಿಕರ ಮೊಬೈಲ್‌ಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.
ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮಗೊಂಡ ಘಟನೆ ಇದಾಗಿದೆ.
ಇದನ್ನೂ ಓದಿ – ಹಾವುಗಳು ಮೊಟ್ಟೆಯಿಡುವ ಅಪರೂಪದ ಫೋಟೋ ನೀವು ನೋಡಿದ್ದೀರಾ? ಅಪರೂಪದ ಕ್ಲಿಕ್ ಮಾಡಿದ ವ್ಯಕ್ತಿ.
ನೌಕಾನೆಲೆಯ ಕಟ್ಟಡ ಕಾಮಗಾರಿಗೆ ಒರಿಶಾ ಸೇರಿದಂತೆ ಹೊರರಾಜ್ಯದಿಂದ ನೂರಕ್ಕೂ ಅಧಿಕ ಕಾರ್ಮಿಕರು ಈ ಕಾಲೋನಿಯಲ್ಲಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದು, ಈ ಶೆಡ್‌ಗಳಲ್ಲಿನ ಒಂದು ದೊಡ್ಡ ಸಿಲಿಂಡರ್, ಎರಡು ಸಣ್ಣ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.
ಇದನ್ನೂ ಓದಿರಿ – ಉತ್ತರಕನ್ನಡದ ಜನರ ಬಹುದಿನದ ಬೇಡಿಕೆ ಈಡೇರಿಕೆಗೆ ದಿನಗಣನೆ..?
ಸ್ಫೋಟದ ತೀವ್ರತೆಗೆ ಶೆಡ್‌ನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, 25ಕ್ಕೂ ಅಧಿಕ ಕಾರ್ಮಿಕರ ಮೊಬೈಲ್‌ಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.