ನವದೆಹಲಿ: ದೇಶಾದ್ಯಂತ ವಿವಾದ ಸೃಷ್ಟಿಸಿದ್ದ ಹಿಜಾಬ್ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ಪ್ರಕಟಿಸಿದ್ದಾರೆ. ನ್ಯಾ. ಹೇಮಂತ್ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ತಳ್ಳಿಹಾಕಿ ತಮ್ಮ ತೀರ್ಪನ್ನು ಪ್ರಕಟಿಸಿದ್ದು, ನ್ಯಾ. ಧುಲಿಯಾರವರು ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ತಿರಸ್ಕರಿಸಿ ತೀರ್ಪು ನೀಡಿದ್ದಾರೆ. ಸುಪ್ರೀಂ ಪೀಠವು ಸೂಕ್ತ ನಿರ್ಧಾರಕ್ಕಾಗಿ ಈ ಪ್ರಕರಣವನ್ನು ಸಿಜೆಐ ಗೆ ವರ್ಗಾವಣೆ ಮಾಡಿ ಆದೇಶ ನೀಡಿದೆ.
ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣವನ್ನ ಸಿ.ಜೆ.ಐ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಶಾಲೆಗಳಲ್ಲಿ ಹಿಜಾಬ್ಗೆ ಅವಕಾಶ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು..!
ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠದಲ್ಲಿ ಹಿಜಾಬ್ ಅರ್ಜಿಯ ವಿಚಾರಣೆ ನಡೆದಿತ್ತು. ಸಾಮಾನ್ಯವಾಗಿ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಒಂದೇ ತೀರ್ಪು ನೀಡಿ ಇಬ್ಬರು ನ್ಯಾಯಮೂರ್ತಿಗಳು ಸಹಿ ಹಾಕುತ್ತಿದ್ದರು. ಆದ್ರೆ ಹಿಜಾಬ್ ವಿವಾದದಲ್ಲಿ ಇಬ್ಬರು ನ್ಯಾಯಮೂರ್ತಿಗಳು ಪ್ರತ್ಯೇಕ ಎರಡು ತೀರ್ಪು ನೀಡಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳು ಭಿನ್ನ ತೀರ್ಪನ್ನ ನೀಡಿದರು. ಹೀಗಾಗಿ ಸುಪ್ರೀಂ ಕೋರ್ಟ್ ಸಿಜಿಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡಿದೆ.
ಇದನ್ನೂ ಓದಿ – ಆತ್ಮಹತ್ಯೆ ಮಾಡಿಕೊಳ್ಳಲು ಸೇತುವೆಯ ಮೇಲಿನಿಂದ ಜಿಗಿದ ಯುವತಿ : ಕಾರವಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ.
ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದು ಹಿಜಾಬ್ ವಿವಾದ. ಶಾಲೆಗಳಲ್ಲಿ ಭಾರೀ ಧರ್ಮದಂಗಲ್ಗೂ ಹಿಜಾಬ್ ಎಡೆಮಾಡಿಕೊಟ್ಟಿತ್ತು. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಹಿಜಾಬ್ ಪರ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಮತ್ತೆ ವಾತಾವರಣ ಬಿಗುವಾಗುವ ನಿರೀಕ್ಷೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.